ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣೆ

ಕಾರ್ಕಳ: ಅಂಬಾಭವಾನಿ ಕ್ರ್ಯಾಕರ್ಸ್ ಕಾರ್ಕಳ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಕಾರ್ಕಳ ಇದರ ಸಹಭಾಗಿತ್ವದಲ್ಲಿ ನವೆಂಬರ್ 27ರಂದು ಸಂಜೆ 6 ಗಂಟೆಗೆ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಶೇಷ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ 250ಕ್ಕೂ ಅಧಿಕ ಭಜಕರಿಂದ ದೊಂದಿಯ ಬೆಳಕಿನಲ್ಲಿ ಭಜನಾ ಸೇವೆ ನಡೆಯಲಿದ್ದು, ಇದರೊಂದಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವೂ ಜರುಗಲಿದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

























































































