
ಕಾರ್ಕಳ: ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲನೆ ನಡೆಸಿದರು.
ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಎಂಟು ಮಂದಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.
ಪುರಸಭೆಯ ಕಚೇರಿಗೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯಲ್ಲಿರುವ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದರು. ಪುರಸಭೆಯ ಆಡಳಿತಾತ್ಮಕ ಕಾರ್ಯವೈಖರಿ, ಸಾರ್ವಜನಿಕರಿಗೆ ಸಂಬಂಧಿಸಿದ ಅರ್ಜಿಗಳು ಹಾಗೂ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿಯಿಂದ ಪುರಸಭೆ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ಕಂಡುಬಂದಿತು. ಅಧಿಕಾರಿಗಳ ಪರಿಶೀಲನೆ ವೇಳೆ ಯಾವೆಲ್ಲ ಅಂಶಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.



















































































