
ಕಾರ್ಕಳ: ಉಡುಪಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ವ್ಯಕ್ತಿಯೊಬ್ಬರು ಇಲ್ಲಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್ ಬಳಿಯ ಲಾಡ್ಜ್ ಒಂದರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದು.
ದುರ್ಗಾ ಗ್ರಾಮದ ನಿವಾಸಿ ಶಿವಾನಂದ ಮೃತ ದುರ್ದೈವಿ.
ಸೆಪ್ಟೆಂಬರ್ 11ರಂದು ಬೆಳಿಗ್ಗೆ 6 ಗಂಟೆಗೆ ಉಡುಪಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಶಿವಾನಂದ ಅವರು ಬಳಿಕ ಮನೆಗೆ ಮರಳಿರಲಿಲ್ಲ. ಅಕ್ಕಪಕ್ಕದ ಮನೆಯವರಿಗೂ ಕರೆ ಮಾಡಿ ಮಾತನಾಡಿದ್ದರು. ಆದರೆ, ಸೆಪ್ಟೆಂಬರ್ 14ರ ರಾತ್ರಿ 8 ಗಂಟೆ ಸುಮಾರಿಗೆ ಪುಕ್ಕೇರಿ ಬೈಪಾಸ್ ಬಳಿಯ ಹೋಟೆಲ್ನ ಕೊಠಡಿಯಲ್ಲಿ ಶಿವಾನಂದ ಅವರು ಬಿದ್ದು ಮೃತಪಟ್ಟಿರುವುದಾಗಿ ಅವರ ಸಹೋದರ ರತ್ನಾಕರ ಸುವರ್ಣ ಅವರಿಗೆ ಮಂಜುನಾಥ್ ಎಂಬುವರು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






























































































































