24 C
Udupi
Wednesday, October 7, 2026
spot_img
spot_img
HomeBlogಕರ್ನಾಟಕದಲ್ಲಿ ಹಾಲಿನ ದರ ಏರಿಕೆ: ಲೀಟರ್‌ಗೆ ₹ 8 ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ: ಲೀಟರ್‌ಗೆ ₹ 8 ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ

ಬೆಂಗಳೂರು: ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರತಿ ಲೀಟರ್‌ಗೆ ₹ 10 ಹೆಚ್ಚಳ ಮಾಡುವಂತೆ ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದರೂ, ಸರ್ಕಾರ ₹ 8 ಹೆಚ್ಚಳಕ್ಕೆ ಒಲವು ತೋರಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ನಡೆಯಿತು. ಅಂತಿಮ ದರ ನಿಗದಿ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿವೇಚನೆಗೆ ಬಿಡಲಾಯಿತು.

₹ 10 ಅಥವಾ ₹ 12ರ ಬದಲು ಪ್ರತಿ ಲೀಟರ್‌ಗೆ ₹ 8 ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ಸಿಎಂ ಒಲವು ವ್ಯಕ್ತಪಡಿಸಿದ್ದು, ಸಚಿವ ಸಂಪುಟವೂ ಇದಕ್ಕೆ ಸಮ್ಮತಿಸಿದೆ.

ಆದರೆ ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿದೆ. ಅನುಮತಿ ದೊರೆತ ಬಳಿಕ ದರ ಏರಿಕೆ ಕುರಿತು ಅಧಿಕೃತ ಆದೇಶ ಹೊರಬೀಳಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page