
ಬೆಂಗಳೂರು: KPTCL,AE & JE ಹುದ್ದೆಗಳ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಹೈಕೋರ್ಟ್ ಮರು ಪರೀಕ್ಷೆಗೆ ಆದೇಶ ಹೊರಡಿಸಿದೆ. ನೆಗೆಟಿವ್ ಮಾರ್ಕಿಂಗ್ ಬಗ್ಗೆ ಸೂಕ್ತ ಮಾಹಿತಿ ನೀಡದಿರುದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ಪರಿಗಣಿಸಿದೆ.
ಫೆ.21,2022 ರಂದು AE,jE ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಗಸ್ಟ್ 17ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟ ಮಾಡಲಾಗಿತ್ತು.
ಇದೀಗ ಕೋರ್ಟ್ ಮರು ಪರೀಕ್ಷೆಗೆ ಆದೇಶ ನೀಡಿದ್ದು ಫೆಬ್ರವರಿ 18, 2024 ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು.






















































