29.4 C
Udupi
Monday, November 2, 2026
spot_img
spot_img
HomeBlogಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ, ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ, ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮರು ನಿಯೋಜಿಸಿರುವ ಆದೇಶವನ್ನು ಮರುಪರಿಶೀಲಿಸಿ, ಬೇರೆಡೆಗೆ ವರ್ಗಾ ಯಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.

ಡಾ.ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ವರದಿ ಪ್ರಕಟಿಸಿದ ಕಾರಣಕ್ಕೆ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ತಾಲೂಕು ವರದಿಗಾರ ಹಾಗೂ ಸಂಘದ ಸದಸ್ಯ ಶ್ರೀಕಾಂತ ಹೆಮ್ಮಾಡಿ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿದೆ.

ಅಲ್ಲದೆ ಆರೋಗ್ಯ ಇಲಾಖೆಯು ವೈದ್ಯರನ್ನು ಅಮಾನತುಗೊಳಿಸಿ, ಲೀನ್ ಅಡಿಯಲ್ಲಿ ಗದಗ ಜಿಲ್ಲೆಗೆ ಶಸ್ತ್ರಚಿಕಿತ್ಸಕರ ಹುದ್ದೆಗೆ ಸ್ಥಳಾಂತರಿಸಿತ್ತು. ಆದರೆ, ಘಟನೆ ನಡೆದು ಕೇವಲ ಎರಡು ತಿಂಗಳ ಅವಧಿಯಲ್ಲೇ, ಹಲ್ಲೆಗೈದ ಅದೇ ವೈದ್ಯರನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶಸ್ತ್ರಚಿಕಿತ್ಸಕರ ಹುದ್ದೆಗೆ ನಿಯೋಜಿಸಿರುವುದು ಖಂಡನೀಯ.

ಆದುದರಿಂದ ಡಾ. ಮಹೇಂದ್ರ ಕುಮಾರ್ ಶೆಟ್ಟಿಯನ್ನು ಮತ್ತೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ನಿಯೋಜಿಸಿರುವ ಆದೇಶವನ್ನು ತಕ್ಷಣ ಮರು ಪರಿಶೀಲಿಸಬೇಕು. ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಪತ್ರಕರ್ತರ ಸುರಕ್ಷತೆಯ ದೃಷ್ಟಿಯಿಂದ ಅವರನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಬೇರೆ ಜಿಲ್ಲೆ ಅಥವಾ ತಾಲೂಕಿಗೆ ನಿಯೋಜಿಸು ವಂತೆ ಆರೋಗ್ಯ ಇಲಾಖೆಗೆ ಸೂಚಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿಯನ್ನು ಸ್ವೀಕರಿಸಿದ ಸಚಿವರು, ಸ್ಥಳದಲ್ಲಿದ್ದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ಸಮಿತಿ ಸದಸ್ಯರಾದ ಅಜಿತ್ ಆರಾಡಿ, ಪ್ರಮೋದ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page