24.3 C
Udupi
Friday, September 25, 2026
spot_img
spot_img
HomeBlogಮೈಸೂರು ದಸರಾ ಉದ್ಘಾಟಕರಾಗಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ

ಮೈಸೂರು ದಸರಾ ಉದ್ಘಾಟಕರಾಗಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ

ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಈ ಘೋಷಣೆ ಮಾಡಿದ್ದು, ದಸರಾ ಉದ್ಘಾಟಕರ ಆಯ್ಕೆಯ ಕುತೂಹಲಕ್ಕೆ ತೆರೆ ಬಿದ್ದಿದೆ.

ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ 18ನೇ ಪೀಠಾಧಿಪತಿಯಾಗಿರುವ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸರಳತೆ, ಸಾಮಾಜಿಕ ಕಳಕಳಿ ಹಾಗೂ ದಾಸೋಹ ಪರಂಪರೆಯಿಂದ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಜನರು ಅವರನ್ನು ‘ನಡೆದಾಡುವ ದೇವರು’ ಮತ್ತು ‘ಜಲಋಷಿ’ ಎಂದೂ ಕರೆಯುತ್ತಾರೆ.

2002ರ ಡಿಸೆಂಬರ್ 13ರಂದು ಪೀಠಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅವರು, ಉತ್ತರ ಕರ್ನಾಟಕದ ನೀರಿನ ಸಮಸ್ಯೆ ನಿವಾರಣೆಗೆ ‘ಜಲ ದೀಕ್ಷೆ’ ಅಭಿಯಾನ ಆರಂಭಿಸಿದರು. ಇದರ ಮೂಲಕ ನೂರಾರು ಕೆರೆಗಳ ಹೂಳೆತ್ತಿಸಿ ಜಲ ಸಂರಕ್ಷಣೆಗೆ ಒತ್ತು ನೀಡಿದರು. ಮಠದ ವತಿಯಿಂದ ಅನ್ನ, ಅರಿವು ಮತ್ತು ಆಧ್ಯಾತ್ಮದ ತ್ರಿವಿಧ ದಾಸೋಹವೂ ನಿರಂತರವಾಗಿ ನಡೆಯುತ್ತಿದ್ದು, ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ.

‘ಅಜ್ಜನ ಜಾತ್ರೆ’ ಎಂದೇ ಪ್ರಸಿದ್ಧವಾಗಿರುವ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ದಕ್ಷಿಣ ಭಾರತದ ಕುಂಭಮೇಳ ಎಂಬ ಖ್ಯಾತಿ ಪಡೆದಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಜಾತ್ರೆಯ ಮೂಲಕ ಗುರುತಿಸಿ, ಪರಿಚಯಿಸುವ ಪರಂಪರೆಯನ್ನು ಮಠ ಹೊಂದಿದೆ. ಇದೀಗ ಮೈಸೂರು ದಸರಾ ಉದ್ಘಾಟನೆಯ ಜವಾಬ್ದಾರಿಯೂ ಶ್ರೀಗಳ ಪಾಲಾಗಿದೆ.

ರಾಜಕೀಯದಿಂದ ಅಂತರ ಕಾಯ್ದುಕೊಂಡಿರುವ ಶ್ರೀಗಳು

ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸರಳ ಹಾಗೂ ಸೌಮ್ಯ ಸ್ವಭಾವಕ್ಕೆ ಹೆಸರಾಗಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಮಠದ ಆವರಣವನ್ನು ಸ್ವತಃ ಸ್ವಚ್ಛಗೊಳಿಸುವ ಅವರು, ಸಾಮಾನ್ಯ ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಾರೆ. ರಾಜಕೀಯ ಕಾರ್ಯಕ್ರಮಗಳಿಂದ ಸಾಮಾನ್ಯವಾಗಿ ದೂರ ಉಳಿಯುವ ಅವರು, ಯಾವುದೇ ರಾಜಕಾರಣಿಯ ಪರ ಅಥವಾ ವಿರೋಧವಾಗಿ ಬಹಿರಂಗ ಹೇಳಿಕೆ ನೀಡಿಲ್ಲ.

ಗವಿಮಠವು ಉತ್ತರ ಕರ್ನಾಟಕದ ಪ್ರಮುಖ ಹಾಗೂ ಪುರಾತನ ಮಠಗಳಲ್ಲಿ ಒಂದಾಗಿದೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಮಠವು ಶಿಕ್ಷಣ, ಅನ್ನದಾಸೋಹ ಹಾಗೂ ಆಧ್ಯಾತ್ಮಿಕ ಸೇವೆಗಳ ಮೂಲಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ.

ಸ್ಥಳೀಯ ಜನರ ಸಮಸ್ಯೆಗಳ ವಿಚಾರದಲ್ಲಿ ಮಾತ್ರ ಶ್ರೀಗಳು ಜನರೊಂದಿಗೆ ನಿಂತು ಸರ್ಕಾರದ ಗಮನ ಸೆಳೆದಿರುವ ಉದಾಹರಣೆಗಳಿವೆ. ಜೀವನದ ಕುರಿತು ಅವರು ನೀಡುವ ಆಶೀರ್ವಚನಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಅನೇಕರು ಅವುಗಳನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗಳಾಗಿ ಹಂಚಿಕೊಳ್ಳುತ್ತಾರೆ.

ಹಲವು ಹೆಸರುಗಳು ಚರ್ಚೆಯಲ್ಲಿದ್ದವು

ಮೈಸೂರು ದಸರಾ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಆಹ್ವಾನಿಸುವಂತೆ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದರೊಂದಿಗೆ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಹೆಸರುಗಳೂ ಚರ್ಚೆಗೆ ಬಂದಿದ್ದವು. ಅಂತಿಮವಾಗಿ ಉದ್ಘಾಟಕರ ಆಯ್ಕೆಯ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿತ್ತು.

ಈ ವರ್ಷದ ಮೈಸೂರು ದಸರಾ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿದೆ. ಅ.11ರಂದು ದಸರಾಗೆ ಚಾಲನೆ ದೊರೆಯಲಿದ್ದು, ಅ.21ರಂದು ವಿಜಯದಶಮಿ ಜಂಬೂಸವಾರಿ ನಡೆಯಲಿದೆ. ಪ್ರವಾಸಿಗರನ್ನು ಆಕರ್ಷಿಸಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಬಾರಿ ಮೊದಲ ಬಾರಿಗೆ ದಸರಾ ಕಾರ್ಯಕ್ರಮದಲ್ಲಿ ಕರಾವಳಿಯ ಪ್ರಸಿದ್ಧ ಕ್ರೀಡೆ ಕಂಬಳಕ್ಕೂ ಅವಕಾಶ ನೀಡಲಾಗಿದೆ. ಚಿನ್ನದ ಅಂಬಾರಿ ಹೊರುತ್ತಿದ್ದ ಅಭಿಮನ್ಯು ಆನೆ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ, ಈ ಬಾರಿ ಅಂಬಾರಿ ಹೊರುವ ಹೊಸ ಆನೆಯ ಆಯ್ಕೆ ಕುತೂಹಲ ಮೂಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page