
ಬೆಂಗಳೂರು: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಮಂಗಳವಾರ (ಆ.18) ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಸ್ವಕ್ಷೇತ್ರ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ತಿಪಟೂರು ಕ್ಷೇತ್ರದಿಂದ 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಬಿ.ಸಿ. ನಾಗೇಶ್ ನಿಧನಕ್ಕೆ ರಾಜಕೀಯ ಮುಖಂಡರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.






















