29 C
Udupi
Saturday, September 26, 2026
spot_img
spot_img
HomeBlog‘ಮೇರಾ ರೇಷನ್’ ಆ್ಯಪ್‌ನಲ್ಲಿ ಮಾಡಿದ ಇ-ಕೆವೈಸಿ ಮಾನ್ಯವಲ್ಲ

‘ಮೇರಾ ರೇಷನ್’ ಆ್ಯಪ್‌ನಲ್ಲಿ ಮಾಡಿದ ಇ-ಕೆವೈಸಿ ಮಾನ್ಯವಲ್ಲ

ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಮಹತ್ವದ ಎಚ್ಚರಿಕೆ

ಬೆಂಗಳೂರು: ಕೇಂದ್ರ ಸರ್ಕಾರದ ‘ಮೇರಾ ರೇಷನ್’ ಮೊಬೈಲ್ ಆ್ಯಪ್ ಮೂಲಕ ಮನೆಯಲ್ಲೇ ಮಾಡಿಕೊಳ್ಳುವ ರೇಷನ್ ಕಾರ್ಡ್ ಇ-ಕೆವೈಸಿ ಕರ್ನಾಟಕದಲ್ಲಿ ಮಾನ್ಯವಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯನ್ನು ನಂಬದಂತೆ ಸಾರ್ವಜನಿಕರಿಗೆ ಸೂಚಿಸಿದೆ.

ಗೊಂದಲಕ್ಕೆ ಕಾರಣವೇನು?

ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗುವ ಜನದಟ್ಟಣೆ ಹಾಗೂ ಸರ್ವರ್ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಕೆಲವರು ‘ಮೇರಾ ರೇಷನ್’ ಅಥವಾ ‘Mera eKYC’ ಆ್ಯಪ್ ಮೂಲಕ ಮುಖ ಗುರುತಿಸುವಿಕೆ ಬಳಸಿ ಮನೆಯಲ್ಲೇ ಇ-ಕೆವೈಸಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಈ ಆ್ಯಪ್‌ಗಳ ಸರ್ವರ್‌ಗಳು ಕರ್ನಾಟಕ ಆಹಾರ ಇಲಾಖೆಯ ಪಡಿತರ ತಂತ್ರಾಂಶಕ್ಕೆ ಸಂಪರ್ಕ ಹೊಂದಿಲ್ಲ. ಹೀಗಾಗಿ ಆ್ಯಪ್‌ನಲ್ಲಿ ಮಾಡಿದ ಕೆವೈಸಿ ರಾಜ್ಯದ ದಾಖಲೆಗಳಲ್ಲಿ ನವೀಕರಣವಾಗುವುದಿಲ್ಲ. ಆಹಾರ ಇಲಾಖೆಯ ಉಪ ನಿರ್ದೇಶಕ ಕೆ.ಪಿ. ಮಧುಸೂದನ್ ಅವರು, ಇಂತಹ ಸುಳ್ಳು ಮಾಹಿತಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.

ನ್ಯಾಯಬೆಲೆ ಅಂಗಡಿಯಲ್ಲೇ ಇ-ಕೆವೈಸಿ:
ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಪೋಸ್ ಯಂತ್ರದ ಮೂಲಕ ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಪೂರ್ಣಗೊಳಿಸಬೇಕು. ಜನದಟ್ಟಣೆ ಮತ್ತು ಸರ್ವರ್ ಸಮಸ್ಯೆ ನಿವಾರಣೆಗೆ ಇಲಾಖೆ ಪ್ರತ್ಯೇಕ ಅಧಿಕೃತ ಆ್ಯಪ್ ಅಭಿವೃದ್ಧಿಪಡಿಸುತ್ತಿದ್ದು, ಅದು ಬಿಡುಗಡೆಯಾಗುವವರೆಗೆ ಯಾವುದೇ ಮೂರನೇ ವ್ಯಕ್ತಿಯ ಆ್ಯಪ್ ಬಳಸಬಾರದು ಎಂದು ಸೂಚಿಸಲಾಗಿದೆ.

ಗಡುವು ವಿಸ್ತರಣೆ:
ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಇ-ಕೆವೈಸಿಗೆ ನಿಗದಿಯಾಗಿದ್ದ ಗಡುವನ್ನು ಆಹಾರ ಇಲಾಖೆ ಅಕ್ಟೋಬರ್ 20ರವರೆಗೆ ವಿಸ್ತರಿಸಿದೆ.

ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಂಡಿದೆಯೇ ಎಂಬುದನ್ನು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ನ ‘ಇ-ಸೇವೆಗಳು’ ವಿಭಾಗದಲ್ಲಿರುವ ‘e-Status’ ಮೂಲಕ ಪರಿಶೀಲಿಸಬಹುದು. ಅಲ್ಲಿ Done/Completed ಎಂದು ಕಾಣಿಸಿದರೆ ಮಾತ್ರ ಕೆವೈಸಿ ಯಶಸ್ವಿಯಾಗಿದೆ ಎಂದು ಪರಿಗಣಿಸಲಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page