30.5 C
Udupi
Monday, October 26, 2026
spot_img
spot_img
HomeBlog'ಮೋದಿ ಅಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'

‘ಮೋದಿ ಅಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ’

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ

ನವದೆಹಲಿ: ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಂದೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಸಭಿಕರೊಬ್ಬರು “ಮೋದಿ ಎಲ್ಲಿಗೂ ಹೋಗುವುದಿಲ್ಲ” ಎಂದು ಕೂಗಿದಾಗ ಪ್ರತಿಕ್ರಿಯಿಸಿದ ಖರ್ಗೆ, “ಮೋದಿ ಮಾತ್ರವಲ್ಲ, ಅವರ ಅಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ” ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಖರ್ಗೆ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ತನ್ನ ಪತ್ರಿಕಾ ಪ್ರಕಟಣೆಯಲ್ಲಿ “ಹಿಂದೆ ಗೂಂಡಾಗಳು ಮತ್ತು ರೌಡಿಗಳು ಬಳಸುತ್ತಿದ್ದ ಭಾಷೆಯನ್ನು ಇಂದು ಕಾಂಗ್ರೆಸ್ ಅಧ್ಯಕ್ಷರು ಬಳಸುತ್ತಿದ್ದಾರೆ. ಹತಾಶೆಯಿಂದ ಅವರ ‘ಯುವರಾಜ’ (ರಾಹುಲ್ ಗಾಂಧಿ) ಒಮ್ಮೆ ರಸ್ತೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದರೆ, ಮತ್ತೊಮ್ಮೆ ಸ್ವಪಕ್ಷದ ನಾಯಕರೊಂದಿಗೇ ಗಲಾಟೆ ಮಾಡಿಕೊಳ್ಳುತ್ತಾರೆ” ಎಂದು ಟೀಕಿಸಿದೆ.

ಸೋನಿಯಾ ಗಾಂಧಿ ಅವರು ಹತ್ತು ವರ್ಷಗಳ ಕಾಲ ಅಧಿಕಾರ ಪಡೆಯಲು ಪ್ರಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಇದೀಗ ರಾಹುಲ್ ಗಾಂಧಿ ಅದೇ ಕನಸನ್ನು ಹೊತ್ತು ವಿದೇಶಗಳಲ್ಲಿ ಸುತ್ತುತ್ತಿದ್ದಾರೆ. ಆದರೆ ದೇಶದ ಜನರು ಕಾಂಗ್ರೆಸ್‌ನ ಈ ಕನಸು ನನಸಾಗಲು ಬಿಡುವುದಿಲ್ಲ ಎಂದು ಬಿಜೆಪಿ ಹೇಳಿದೆ.

ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ಆಕ್ರೋಶ:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ನಾಯಕರು ರಾಜಕೀಯ ಶಿಷ್ಟಾಚಾರದ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಟೀಕಿಸಿದ್ದಾರೆ. ಪ್ರಧಾನಿ ಮೋದಿ ಅವರ ದಿವಂಗತ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು, ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವುದು ಹಾಗೂ ‘ಚಾಯ್‌ವಾಲಾ’ ಎಂದು ಹೀಯಾಳಿಸುವುದು ಕಾಂಗ್ರೆಸ್‌ನ ಅಭ್ಯಾಸವಾಗಿದೆ ಎಂದು ಅವರು ಆರೋಪಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page