30.1 C
Udupi
Wednesday, October 21, 2026
spot_img
spot_img
HomeBlogನ.7: ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ

ನ.7: ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಕಳ: ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.7ರಂದು ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನ ನಿಟ್ಟೆ ವಿನಯ ಹೆಗ್ಡೆ ವೇದಿಕೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ। ಎಂ. ಮೋಹನ್ ಆಳ್ವ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಹಾಗೂ ಯಕ್ಷಗಾನ ಕಲಾವಿದ ಕೋಟೆ ಎಸ್. ರಾಮಭಟ್ಟ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ತಿಳಿಸಿದರು.

ಬುಧವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಯಾಡಲಿದ್ದು, ಧರ್ಮದರ್ಶಿ ಹರಿಕೃಷ್ಣ ಪುನರೂರು ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ. ನೀಲಾವರ ಸುರೇಂದ್ರ ಅಡಿಗ ಅವರ ಶಿಕ್ಷಕನೋರ್ವನ ಕಥಾಲೋಕ, ದೇವದಾಸ್ ಕೆರೆಮನೆ ಅವರ ಉಯ್ಯಾಲೆ ಹಾಗೂ ಡಾ। ಸುಮತಿ ಪಿ. ಅವರ ನೆರಳು ಬೆಳಕಿನ ನಡುವೆ ಕೃತಿಗಳು ಬಿಡುಗಡೆಯಾಗಲಿವೆ. ದಶಪ್ರಭಾ ಸ್ಮರಣ ಸಂಚಿಕೆಯೂ ಬಿಡುಗಡೆಯಾಗಲಿದೆ ಎಂದರು.

ಸಮ್ಮೇಳನದಲ್ಲಿ ಕನ್ನಡ ಗೀತಗಾಯನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 8ರಿಂದ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಶಾಸಕ ಸುನಿಲ್ ಕುಮಾರ್ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮ್ಮೇಳನಕ್ಕೆ ಆಗಮಿಸುವವರಿಗೆ ಕಾರ್ಕಳ ಬೈಪಾಸ್‌ನ ಸಾಗರ ಎಕ್ಸ್‌ಪ್ರೆಸ್ ಹೋಟೆಲ್ ಬಳಿಯಿಂದ ಬೆಳಿಗ್ಗೆ 8ರಿಂದ 10ರವರೆಗೆ ಹಾಗೂ ಸಮಾರೋಪದ ಬಳಿಕ ಬೈಪಾಸ್‌ವರೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕಸಾಪ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಮ್ಮೇಳನದಲ್ಲಿ ಸಾಹಿತಿಗಳಾದ ಡಾ। ನಾ. ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸೃಷ್ಟಿ, ಪ್ರಕಾಶನ ಮತ್ತು ಓದುಗರ ಕುರಿತ ಗೋಷ್ಠಿ ನಡೆಯಲಿದೆ. ಕಾರ್ಕಳದ ವಿದ್ಯಾರ್ಥಿಗಳಿಗೆ ತಮ್ಮ ಸಾಹಿತ್ಯಿಕ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸುವ ವಿದ್ಯಾರ್ಥಿ ಗೋಷ್ಠಿ ಹಾಗೂ ಸಾಹಿತ್ಯ-ಸಂಸ್ಕೃತಿ ಕುರಿತ ವಿಶೇಷ ಉಪನ್ಯಾಸವೂ ಇರಲಿದೆ. ಹಿರಿಯ ಸಾಂಸ್ಕೃತಿಕ ಚಿಂತಕ ಡಾ। ಪ್ರಭಾಕರ ಜೋಶಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಶಿಕ್ಷಣ, ಸಮಾಜಸೇವೆ, ಯಕ್ಷಗಾನ, ಮಾಧ್ಯಮ, ಸಾಹಿತ್ಯ, ದೈವಾರಾಧನೆ, ಕೃಷಿ, ಸಂಶೋಧನೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು ಎಂದು ಹೇಳಿದರು.

ಸಮಾರೋಪದಲ್ಲಿ ಎಂ.ಆರ್.ಜಿ. ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹಾಗೂ ಎಸ್.ಕೆ.ಎನ್. ಇಂಡಸ್ಟ್ರೀಸ್ ಮತ್ತು ಎಲಿಕ್ಸರ್ ಇಂಡಿಯ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ। ಜಿ. ರಾಮಕೃಷ್ಣ ಆಚಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಸಾಣೂರು ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ, ಸಾಹಿತ್ಯ ಪರಿಷತ್ತಿನ ಪ್ರಮುಖರಾದ ರವೀಂದ್ರ ಶೆಟ್ಟಿ ಬಜಗೋಳಿ,ನಿತ್ಯಾನಂದ ಪೈ , ಮೋಹನ್‌ ಪಡಿವಾಳ್‌, ದೇವದಾಸ್‌ ಕೆರೆಮನೆ ಪತ್ರಿಕಾಗೋಷ್ಠಿಯಲ್ಲಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page