30.8 C
Udupi
Wednesday, September 30, 2026
spot_img
spot_img
HomeBlog‘ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ; ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲೂ ಸಿದ್ಧ’: ಪ್ರದೀಪ್ ಈಶ್ವರ್ ಸ್ಪಷ್ಟನೆ

‘ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ; ಪಕ್ಷದ ಕಚೇರಿಯಲ್ಲಿ ಕಸ ಗುಡಿಸಲೂ ಸಿದ್ಧ’: ಪ್ರದೀಪ್ ಈಶ್ವರ್ ಸ್ಪಷ್ಟನೆ

ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಭಿನ್ನಾಭಿಪ್ರಾಯಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಮ್ಮ ಕಾಂಗ್ರೆಸ್ ಪಕ್ಷವು 2028ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಮತ್ತು 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು. ಇದು ನಮ್ಮ ಅತೀ ದೊಡ್ಡ ಜವಾಬ್ದಾರಿ.

ಏನೇ ಭಿನ್ನಾಭಿಪ್ರಾಯಗಳಿದ್ದರೂ, ನಾಲ್ಕು ಗೋಡೆಗಳ ಮಧ್ಯೆ ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ. ನನಗೆ ನನ್ನ ಪಕ್ಷವೇ ಮುಖ್ಯ. ನನ್ನ ಕಾಂಗ್ರೆಸ್ ಪಕ್ಷದ ಭವಿಷ್ಯವೇ ಮುಖ್ಯ. ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾಂಗ್ರೆಸ್ ಪಕ್ಷದಲ್ಲಿ, ಕಾಂಗ್ರೆಸ್ ಪಾರ್ಟಿ ಕಚೇರಿಯಲ್ಲಿ ಕಸ ಗುಡಿಸಲೂ ನಾನು ಸಿದ್ಧವಿದ್ದೇನೆ.ಜೈ ಕಾಂಗ್ರೆಸ್,ಜೈ ರಾಹುಲ್ ಗಾಂಧೀಜಿ ಎಂದು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಮಾಜಿ ಸಚಿವ ಎಂ.ಸಿ. ಸುಧಾಕರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಪ್ರದೀಪ್ ಈಶ್ವರ್ ವಿರುದ್ಧ ಹಲವು ಅಹವಾಲುಗಳನ್ನು ಸಲ್ಲಿಸಿತ್ತು. ಶಾಸಕರ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ಚುನಾವಣೆಗಳ ಕುರಿತು ದೂರು ನೀಡಲಾಗಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯವನ್ನೂ ನಿಯೋಗ ಮುಂದಿಟ್ಟಿದೆ ಎಂದು ವರದಿಯಾಗಿದೆ. ಈ ಬೆಳವಣಿಗೆಯಿಂದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಚರ್ಚೆಗೆ ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page