30.4 C
Udupi
Sunday, October 11, 2026
spot_img
spot_img
HomeBlog"ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ": ಡಿಕೆ ಶಿವಕುಮಾರ್

“ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ”: ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಚರ್ಚೆಗೆ ಬಂದಿದ್ದು, ಸಮಾಜವನ್ನು ವಿಭಜಿಸುವ ಬದಲು ಒಗ್ಗೂಡಿಸುವುದೇ ನಮ್ಮ ಉದ್ದೇಶ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಹಿಂದೆ ಎರಡೂ ಸಮುದಾಯಗಳನ್ನು ಪ್ರತ್ಯೇಕಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಮಠಾಧೀಶರ ಕ್ಷಮೆ ಕೇಳಿದ್ದಾಗಿ ಅವರು ತಿಳಿಸಿದ್ದಾರೆ.

2017-18ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಈ ನಿರ್ಧಾರ ಸಮುದಾಯವನ್ನು ವಿಭಜಿಸುವ ಪ್ರಯತ್ನ ಎಂಬ ಟೀಕೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಶಿರಹಟ್ಟಿಯ ಭಾವೈಕ್ಯತಾ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ 25ಕ್ಕೂ ಹೆಚ್ಚು ಮಠಾಧೀಶರು ಡಿಕೆಶಿ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಅವರು, “ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಂತೆ ಕತ್ತರಿಸುವವರಲ್ಲ. ಒಗ್ಗಟ್ಟಿನಲ್ಲಿ ಶಕ್ತಿಯಿದೆ. ಮಠಗಳ ಮಾರ್ಗದರ್ಶನದಲ್ಲಿ ಸರ್ಕಾರ ಮುನ್ನಡೆಯಲಿದೆ” ಎಂದು ಭರವಸೆ ನೀಡಿದರು.

ಈ ಬಾರಿಯ ಮೈಸೂರು ದಸರಾವನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸುವ ನಿರ್ಧಾರವನ್ನು ಅವರೊಂದಿಗೆ ಚರ್ಚಿಸಿಯೇ ಕೈಗೊಳ್ಳಲಾಗಿದೆ ಎಂದು ಡಿಕೆಶಿ ಸ್ಪಷ್ಟಪಡಿಸಿದರು. ಕೆಲವರು ಸ್ವಾಮೀಜಿಗಳು ಇದಕ್ಕೆ ಒಪ್ಪಿಲ್ಲ ಎಂಬ ಸುಳ್ಳು ಸುದ್ದಿಗಳನ್ನು ಹರಡಿ ರಾಜಕೀಯ ಮಾಡಲು ಯತ್ನಿಸಿದ್ದಾರೆ ಎಂದು ಆಕ್ಷೇಪಿಸಿದರು.

ಧರ್ಮ ಮತ್ತು ಜಾತಿಗಿಂತ ಮಾನವೀಯತೆ ಮುಖ್ಯ ಎಂದು ಪ್ರತಿಪಾದಿಸಿದ ಡಿಕೆಶಿ, ಚೆನ್ನೈ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಮುಸ್ಲಿಂ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ ಸಂದರ್ಭವನ್ನು ಸ್ಮರಿಸಿದರು. “ಧರ್ಮ ಮತ್ತು ಜಾತಿಗಿಂತ ಮಾನವೀಯತೆಯೇ ಮುಖ್ಯ, ಎಲ್ಲರೂ ಒಂದೇ ಎಂದು ನಾನು ಅಂದು ಹೇಳಿದ್ದೆ. ಆ ಮಾತಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಂಡಿಲ್ಲ” ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page