29.8 C
Udupi
Monday, October 5, 2026
spot_img
spot_img
HomeBlogನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ 2027: ಅ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ 2027: ಅ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಮೈಸೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಜವಾಹರ್ ನವೋದಯ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆ–2027ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಪಿ.ಎಂ. ಶ್ರೀ ಶಾಲೆಯ ಪ್ರಾಚಾರ್ಯ ವಿ. ಶ್ರೀನಿವಾಸನ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಅವಕಾಶ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ನವೋದಯ ವಿದ್ಯಾಲಯಗಳ ಪ್ರಮುಖ ಉದ್ದೇಶವಾಗಿದ್ದು ಶೈಕ್ಷಣಿಕ ಕಲಿಕೆಯ ಜತೆಗೆ ವಿಜ್ಞಾನ, ಕಲೆ, ತಂತ್ರಜ್ಞಾನ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಸತಿ, ಊಟ, ಸಮವಸ್ತ್ರ ಹಾಗೂ ಪಠ್ಯಪುಸ್ತಕ ಸೇರಿದಂತೆ ಹಲವು ಸೌಲಭ್ಯಗಳು ಉಚಿತವಾಗಿ ದೊರೆಯುತ್ತವೆ.

ಅರ್ಜಿ ಸಲ್ಲಿಸುವವರು ಕೊನೆಯ ದಿನದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು ಹೆಸರು, ಜನ್ಮ ದಿನಾಂಕ, ಶಾಲೆಯ ವಿವರ ಸೇರಿದಂತೆ ಅಗತ್ಯ ಮಾಹಿತಿಗಳನ್ನು ದಾಖಲೆಗಳಿಗೆ ಅನುಗುಣವಾಗಿ ಯಾವುದೇ ತಪ್ಪಿಲ್ಲದೆ ನಮೂದಿಸುವಂತೆ ತಿಳಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page