
ನವದೆಹಲಿ: ಇಂದು ದೆಹಲಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೈತ್ರಿಕೂಟ ಸಭೆ ನಡೆದಿದ್ದು, ಕಿಂಗ್ ಮೇಕರ್ ಗಳಾದ ಜೆಡಿಯುನ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಕೂಡ ಸಭೆಯಲ್ಲಿ ಭಾಗಿಗಳಾಗಿದ್ದರು.
ಇಂದು ನಡೆದ ಸಭೆಯಲ್ಲಿ, ಎನ್.ಡಿಎ ಸರಕಾರ ರಚನೆಗೆ ಒಕ್ಕೂಟದ ನಾಯಕರು ಗ್ರೀನ್ ಸಿಗ್ನಲ್ ನೀಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ತಮ್ಮ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಲಿ, ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ ಎನ್ನಲಾಗಿದೆ.
ಇಂದು ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಗ್ರಹ ಸಚಿವ ಅಮಿತ್ ಷಾ ,ರಕ್ಷಣಾ ಸಚಿವ ರಾಜನಾಥ್ ಸಿಂಗ್, ಏಕನಾಥ್ ಶಿಂಧೆ, ಎಚ್ ಡಿ ಕುಮಾರಸ್ವಾಮಿ, ಪ್ರಫುಲ್ ಪಟೇಲ್, ಪವನ್ ಕಲ್ಯಾಣ್ ಮೊದಲಾದವರು ಪಾಲ್ಗೊಂಡಿದ್ದರು.