31.5 C
Udupi
Saturday, November 21, 2026
spot_img
spot_img
HomeBlog'ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಮರುಜೀವ ನೀಡಿ, ಸಾವಿರಾರು ಉದ್ಯೋಗ ಸೃಷ್ಟಿಸಿ': ಬೆಳ್ಳಿಪ್ಪಾಡಿ ನೇಮಿರಾಜ್ ರೈ...

‘ನಿಟ್ಟೆ ಜವಳಿ ಪಾರ್ಕ್ ಯೋಜನೆಗೆ ಮರುಜೀವ ನೀಡಿ, ಸಾವಿರಾರು ಉದ್ಯೋಗ ಸೃಷ್ಟಿಸಿ’: ಬೆಳ್ಳಿಪ್ಪಾಡಿ ನೇಮಿರಾಜ್ ರೈ ಒತ್ತಾಯ

ಕಾರ್ಕಳ: ರಾಜ್ಯದಲ್ಲಿ ಜವಳಿ ಮತ್ತು ಸಿದ್ಧ ಉಡುಪು ನೀತಿಯಡಿ ಜವಳಿ ಉದ್ಯಮಕ್ಕೆ ಸುಮಾರು 20,000 ಕೋಟಿ ರೂ. ಹೂಡಿಕೆ ಆಕರ್ಷಿಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಈಗಾಗಲೇ ಮಂಜೂರಾಗಿರುವ ಜವಳಿ ಪಾರ್ಕ್ ಯೋಜನೆ ಕಳೆದ ಆರೇಳು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈ ಯೋಜನೆಗೆ ಸರ್ಕಾರ ತಕ್ಷಣ ಮರುಜೀವ ನೀಡಬೇಕು ಎಂದು ಸಾಮಾಜಿಕ ಚಿಂತಕ ಬೆಳ್ಳಿಪ್ಪಾಡಿ ನೇಮಿರಾಜ್ ರೈ ಒತ್ತಾಯಿಸಿದ್ದಾರೆ.

ನಿಟ್ಟೆ ಜವಳಿ ಪಾರ್ಕ್ ಯೋಜನೆಗಾಗಿ ಈಗಾಗಲೇ ಜಾಗವನ್ನು ನೋಂದಾಯಿಸಲಾಗಿದ್ದು, ಅಗತ್ಯ ಭೂಮಿ ಲಭ್ಯವಿದ್ದರೂ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆಡಳಿತಾತ್ಮಕ ವಿಳಂಬವೇ ಅಥವಾ ಅನುದಾನದ ಕೊರತೆಯೇ ಯೋಜನೆ ವಿಳಂಬಕ್ಕೆ ಕಾರಣ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಯೋಜನೆಯ ಪ್ರಸ್ತುತ ಸ್ಥಿತಿಗತಿಯನ್ನು ಪರಿಶೀಲಿಸಿ ಬಾಕಿ ಇರುವ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಕಾಲಮಿತಿ ನಿಗದಿಪಡಿಸಬೇಕು. ಸ್ಥಳೀಯ ಯುವಜನರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಿ ಸಾವಿರಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 20 ಸಾವಿರ ಕೋಟಿ ರೂ. ಹೂಡಿಕೆ ಬರುವುದರ ಜತೆಗೆ, ಈಗಾಗಲೇ ಮಂಜೂರಾಗಿರುವ ನಿಟ್ಟೆ ಜವಳಿ ಪಾರ್ಕ್‌ನಂತಹ ಸ್ಥಳೀಯ ಯೋಜನೆಗಳನ್ನೂ ಸಾಕಾರಗೊಳಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಬೆಳ್ಳಿಪ್ಪಾಡಿ ನೇಮಿರಾಜ್ ರೈ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page