ಗಡುವು ವಿಸ್ತರಣೆ ಇಲ್ಲ!

ರಾಜ್ಯದಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ಬಳಿಕ ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಇನ್ನೂ 41 ಲಕ್ಷಕ್ಕೂ ಹೆಚ್ಚು ಜನರು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿಯಿದೆ. ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆಯಿದೆ.
ಹೀಗಾಗಿ, ಸಾರ್ವಜನಿಕರು ನವೆಂಬರ್ 10ರೊಳಗೆ ಅನ್ನಸೇವಾ ಆ್ಯಪ್ ಮೂಲಕ ಅಥವಾ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಸೂಚಿಸಿದೆ.

























