24.8 C
Udupi
Tuesday, February 17, 2026
spot_img
spot_img
HomeBlogPahalgam Attack, ಸೌದಿ ಅರೇಬಿಯಾ ಪ್ರವಾಸ ಕಡಿತಗೊಳಿಸಿ, ಭಾರತಕ್ಕೆ ಮರಳಿ ವಿಮಾನ ನಿಲ್ದಾಣದಲ್ಲೇ ಸಭೆ ನಡೆಸಿದ...

Pahalgam Attack, ಸೌದಿ ಅರೇಬಿಯಾ ಪ್ರವಾಸ ಕಡಿತಗೊಳಿಸಿ, ಭಾರತಕ್ಕೆ ಮರಳಿ ವಿಮಾನ ನಿಲ್ದಾಣದಲ್ಲೇ ಸಭೆ ನಡೆಸಿದ ಪ್ರಧಾನಿ

spot_imgspot_img

ನವದೆಹಲಿ: ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧದಲ್ಲೇ ಕಡಿತಗೊಳಿಸಿ ಭಾರತಕ್ಕೆ ಹಿಂತಿರುಗಿದ್ದು ದೆಹಲಿಗೆ ಆಗಮಿಸಿ ಪಾಲಂ ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದರು.

ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು ಪೂರ್ವ ನಿಗದಿ ಕಾರ್ಯಕ್ರಮದ ಪ್ರಕಾರ ಇಂದು ರಾತ್ರಿ ಮೋದಿ ಹಿಂತಿರುಗಬೇಕಿತ್ತು. ಆದರೆ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಮಂಗಳವಾರ ರಾತ್ರಿಯೇ ಭಾರತದತ್ತ ಪ್ರಯಾಣ ಆರಂಭಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ. ಉಗ್ರರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಹೇಳಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page