31.5 C
Udupi
Tuesday, November 17, 2026
spot_img
spot_img
HomeBlogಪರಶುರಾಮ ಥೀಂ ಪಾರ್ಕ್ ಹೋರಾಟಕ್ಕೆ ತಾರ್ಕಿಕ ಅಂತ್ಯ ಕೊಂಡೊಯ್ಯಲು ಪಣ

ಪರಶುರಾಮ ಥೀಂ ಪಾರ್ಕ್ ಹೋರಾಟಕ್ಕೆ ತಾರ್ಕಿಕ ಅಂತ್ಯ ಕೊಂಡೊಯ್ಯಲು ಪಣ

ನ. 22ರಂದು ಬೆಂಗಳೂರಿನಿಂದ ಬೈಲೂರಿಗೆ ಬೃಹತ್ ವಾಹನ ರ‍್ಯಾಲಿ, ಜನಾಗ್ರಹ ಸಭೆ: ಸಚ್ಚಿದಾನಂದ

ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿರುವ ಪರಶುರಾಮ ಥೀಂ ಪಾರ್ಕ್ ಅನ್ನು ಸಾರ್ವಜನಿಕರ ಪ್ರವೇಶಕ್ಕೆ ತಕ್ಷಣ ಮುಕ್ತಗೊಳಿಸಬೇಕು ಹಾಗೂ ಈ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿರುವ ಉದ್ದೇಶಪೂರ್ವಕ ವಿಳಂಬ ನೀತಿಯನ್ನು ಖಂಡಿಸಿ ನವೆಂಬರ್ 22ರಂದು ಬೆಂಗಳೂರಿನಿಂದ ಬೈಲೂರಿಗೆ ಬೃಹತ್ ವಾಹನ ರ‍್ಯಾಲಿ ಹಾಗೂ ಜನಾಗ್ರಹ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಕಳ ಪರಶುರಾಮ ಥೀಂ ಪಾರ್ಕ್ ಜನಾಗ್ರಹ ಸಮಿತಿಯ ಸಚ್ಚಿದಾನಂದ ತಿಳಿಸಿದ್ದಾರೆ.


ಅಂದು ಬೆಳಗ್ಗೆ ಬೆಂಗಳೂರಿನಿಂದ ಬೃಹತ್ ವಾಹನ ರ‍್ಯಾಲಿ ಹೊರಡಲಿದ್ದು, ಮಧ್ಯಾಹ್ನ 3 ಗಂಟೆಗೆ ಬೈಲೂರಿನಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸಿ ಕಾರ್ಕಳದ ಪ್ರವಾಸೋದ್ಯಮದ ಬೆಳವಣಿಗೆಗೆ ತಡೆಯೊಡ್ಡುವ ಸ್ಥಳೀಯ ಕಾಂಗ್ರೆಸ್ ನಾಯಕರ ರಾಜಕೀಯ ಷಡ್ಯಂತ್ರದ ಪರಿಣಾಮವಾಗಿ ಮಹತ್ವಾಕಾಂಕ್ಷಿ ಯೋಜನೆಯೊಂದು ಕಳೆದ ನಾಲ್ಕು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ತನಿಖೆಯ ಹೆಸರಿನಲ್ಲಿ ವರ್ಷಗಳ ಕಾಲ ಕಾಲಹರಣ ಮಾಡಿರುವ ಸರ್ಕಾರಕ್ಕೆ ಈ ಯೋಜನೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಇಚ್ಛಾಶಕ್ತಿಯೇ ಇಲ್ಲದಂತಾಗಿದೆ.
ಶಾಸಕ ವಿ. ಸುನಿಲ್ ಕುಮಾರ್ ಅವರು ಕಾರ್ಕಳವನ್ನು ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಿದ್ದರು. ಸ್ಥಳೀಯ ಜನರ ಆರ್ಥಿಕ ಮಟ್ಟ ಸುಧಾರಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಸ್ವಾವಲಂಬಿ ಬದುಕಿಗೆ ಅವಕಾಶ ಕಲ್ಪಿಸುವ ದೂರದೃಷ್ಟಿ ಈ ಯೋಜನೆಯ ಹಿಂದಿತ್ತು. ಆದರೆ ರಾಜಕೀಯ ಸ್ವಾರ್ಥ ಮತ್ತು ದ್ವೇಷದ ಕಾರಣದಿಂದ ಅಭಿವೃದ್ಧಿಯ ಕನಸಿಗೆ ತಡೆಯೊಡ್ಡಲಾಗಿದೆ. ಜನರ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿಯೇ ಮುಖ್ಯ ಎಂಬಂತೆ ವರ್ತಿಸುತ್ತಿರುವ ಸರ್ಕಾರದ ನಡೆ ಖಂಡನೀಯವಾಗಿದೆ.
ಒಂದು ಭವ್ಯ ಪ್ರವಾಸೋದ್ಯಮ ಯೋಜನೆಯನ್ನು ವಿವಾದದ ಕೇಂದ್ರವನ್ನಾಗಿ ಮಾಡಿದ್ದು ಯಾರು? ನಾಲ್ಕು ವರ್ಷಗಳಿಂದ ತನಿಖೆಯ ನೆಪದಲ್ಲಿ ಕಾಲಹರಣ ಮಾಡುತ್ತಿರುವುದೇಕೆ? ಕಾರ್ಕಳದ ಪ್ರವಾಸೋದ್ಯಮಕ್ಕೆ ಆಗಿರುವ ನಷ್ಟಕ್ಕೆ ಹೊಣೆ ಯಾರು? ಈ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಉತ್ತರಿಸಬೇಕಾಗಿದೆ. ಸುಳ್ಳು ಆರೋಪಗಳು, ಅಪಪ್ರಚಾರ ಮತ್ತು ರಾಜಕೀಯ ಷಡ್ಯಂತ್ರಗಳ ಹಿಂದಿನ ಸತ್ಯವನ್ನು ರಾಜ್ಯದ ಜನತೆಯ ಮುಂದೆ ಬಹಿರಂಗಪಡಿಸುವ ಕಾಲ ಈಗ ಬಂದಿದೆ.
ಥೀಂ ಪಾರ್ಕ್ ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಈ ಹಿಂದೆ ಅನೇಕ ಪ್ರತಿಭಟನೆಗಳ ಮೂಲಕ ಸರ್ಕಾರವನ್ನು ಎಚ್ಚರಿಸಲಾಗಿದೆ. ಆದರೂ ಸ್ಥಳೀಯ ಕಾಂಗ್ರೆಸ್ ನಾಯಕರ ರಾಜಕೀಯ ಒತ್ತಡಕ್ಕೆ ಮಣಿದು ಸರ್ಕಾರ ಮೌನ ವಹಿಸಿರುವುದು ಜನವಿರೋಧಿ ಧೋರಣೆಯಾಗಿದೆ. ಈ ಬಾರಿ ಜನಶಕ್ತಿಯ ಮೂಲಕ ಸರ್ಕಾರದ ಕಣ್ಣು ತೆರೆಸುವ ಹೋರಾಟ ನಡೆಯಲಿದೆ. ಮುಂದಿನ ಮಹಾಮಸ್ತಕಾಭಿಷೇಕಕ್ಕೂ ಮೊದಲು ಥೀಂ ಪಾರ್ಕ್ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಬೇಕು ಎಂಬುದು ನಮ್ಮ ಸ್ಪಷ್ಟ ಆಗ್ರಹವಾಗಿದೆ.
ಕಾರ್ಕಳದ ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಬೆಳವಣಿಗೆಯನ್ನು ರಾಜಕೀಯ ದ್ವೇಷಕ್ಕಾಗಿ ಬಲಿಕೊಡುವ ಪ್ರಯತ್ನವನ್ನು ಜನತೆ ಎಂದಿಗೂ ಸಹಿಸುವುದಿಲ್ಲ. ಸುಳ್ಳು ಪ್ರಚಾರ, ಆಧಾರರಹಿತ ಆರೋಪ ಮತ್ತು ರಾಜಕೀಯ ದ್ವೇಷದ ಮೂಲಕ ಅಭಿವೃದ್ಧಿ ಯೋಜನೆಯನ್ನು ಮೂಲೆಗುಂಪು ಮಾಡುವ ಪ್ರಯತ್ನಗಳಿಗೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ.
ಪರಶುರಾಮ ಥೀಂ ಪಾರ್ಕ್‌ನ ಹಿಂದಿನ ವೈಭವ ಮರುಕಳಿಸಬೇಕು, ಕಾರ್ಕಳದ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ದೊರೆಯಬೇಕು ಹಾಗೂ ಸಾರ್ವಜನಿಕರಿಗೆ ಪಾರ್ಕ್ ಮುಕ್ತವಾಗಬೇಕು ಎಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ.  ಕಾರ್ಕಳದ ಅಭಿವೃದ್ಧಿ ಮತ್ತು ಸಾರ್ವಜನಿಕರ ಹಕ್ಕಿಗಾಗಿ ನಡೆಯುತ್ತಿರುವ ಜನಾಂದೋಲನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ ಕೈಗೊಂಡು ಪರಶುರಾಮ ಥೀಂ ಪಾರ್ಕ್ ಅನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ ಜನಾಗ್ರಹದ ಹೋರಾಟವನ್ನು ರಾಜ್ಯಾದ್ಯಂತ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಚ್ಚಿದಾನಂದ ಎಚ್ಚರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page