ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರಿಂದ, ಜಿಲ್ಲಾಧಿಕಾರಿಯವರಿಗೆ ಮನವಿ

ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ, ಪ್ರಧಾನ ಕಾರ್ಯದರ್ಶಿ ಅಶೋಕ ಕೆರ್ವಾಶೆ ಇವರು ಇಂದು ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರನ್ನು ಭೇಟಿಯಾಗಿ ಪರಿಸರ ಸೂಕ್ಷ್ಮ ವಲಯ/ ಪ್ರದೇಶ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆ -2006( FRA) ಸಮರ್ಪಕ ಅನುಷ್ಠಾನಗೊಳಿಸುವಂತೆ ಹಾಗೂ ಸ್ಪಷ್ಟತೆ ಮತ್ತು ಮಾಹಿತಿಗಾಗಿ ಕೂಡಲೇ ಸಮುದಾಯದ ವಿಶೇಷ ಸಭೆ ಕರೆಯುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಸಭೆಯನ್ನು ಆಯೋಜಿಸುವುದಾಗಿ ಭರವಸೆ ನೀಡಿದರು.
ಸನ್ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ವಿಶೇಷ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯ್ದೆ -2006 ಕುರಿತಾಗಿ ಚರ್ಚೆ ನಡೆಸಿ ಪರಿಸರ ಸೂಕ್ಷ್ಮ ವಲಯ/ ಪ್ರದೇಶ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕಾಗಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.






















