
ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ವಲಯ ಹಾಗೂ ಶ್ರೀ ಆನಂದ ಶೆಟ್ಟಿ ಸರ್ಕಾರಿ ಪ್ರೌಢಶಾಲೆ, ಕಣಜಾರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ 17 ವರ್ಷದೊಳಗಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ 14 ವರ್ಷದೊಳಗಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಈ ಪಂದ್ಯಾಟದಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರಾವಣಿ ಭಟ್ , ಪ್ರೀಮಾ ರಿಷಾ ಲೋಬೋ ,ಸಮೃದ್ಧಿ ಶೆಣೈ 10ನೇ ತರಗತಿ ಹಾಗೂ
ಸಿಯಾ ಶೆಟ್ಟಿ ,ಖುಷಿ ಬಂಗೇರಾ 7ನೇ ತರಗತಿಯ
ವಿದ್ಯಾರ್ಥಿನಿಯರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಈ ಅದ್ಭುತ ಸಾಧನೆಗೆ ಶಾಲೆಯ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿಯ ಸದಸ್ಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಮಸ್ತ ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದರು.































































































































