
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆಶ್ರಯದಲ್ಲಿ ಶ್ರೀ ಆನಂದ ಶೆಟ್ಟಿ ಸರಕಾರಿ ಪ್ರೌಢಶಾಲೆ ಕಣಜಾರು ಇವರ ಸಹಯೋಗದಲ್ಲಿ 14 ಮತ್ತು 17ರ ವಯೋಮಿತಿಯೊಳಗಿನ ಬಾಲಕರ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಭಿರಾಮ್ ಶೆಟ್ಟಿ ಮತ್ತು ಧವನ್ ಕುಮಾರ್ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.































































































































