24.5 C
Udupi
Sunday, September 13, 2026
spot_img
spot_img
HomeBlog‘ಪೊಲೀಸ್ ಠಾಣೆಗೆ ನುಗ್ಗಿದ್ರೆ ಪರಪ್ಪನ ಅಗ್ರಹಾರಕ್ಕೆ...!': ಪ್ರತಾಪ್ ಸಿಂಹ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

‘ಪೊಲೀಸ್ ಠಾಣೆಗೆ ನುಗ್ಗಿದ್ರೆ ಪರಪ್ಪನ ಅಗ್ರಹಾರಕ್ಕೆ…!’: ಪ್ರತಾಪ್ ಸಿಂಹ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಶನಿವಾರ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೈಸೂರಿನ ಕಡೆಯ “ಪೇಟೆ ರೌಡಿ”ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಸ್ತಿತ್ವ ಕಳೆದುಕೊಂಡ ವ್ಯಕ್ತಿಯೊಬ್ಬರು ಮಾಧ್ಯಮಗಳ ಮುಂದೆ ಪದೇಪದೇ ಅಸಂಬದ್ಧ ಹೇಳಿಕೆ ನೀಡುವ ಮೂಲಕ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎನ್ನುವ ಪ್ರತಾಪ್ ಸಿಂಹ ಅವರಿಗೆ ಮುಕ್ತ ಆಹ್ವಾನವಿದೆ. ಠಾಣೆಗೆ ನುಗ್ಗಿದ ಬಳಿಕ ನೇರವಾಗಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸೂಕ್ಷ್ಮ ವಿಚಾರಗಳನ್ನು ಬಳಸಿಕೊಂಡು ಸಮಾಜದ ಶಾಂತಿ ಕದಡುವ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್ ಅವರು ಮಸೀದಿ ಮುಂದೆ ಪಟಾಕಿ ಸಿಡಿಸಿದರೆ ‘ಗ್ರಹಚಾರ ಬಿಡಿಸುತ್ತೇನೆ’ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪ್ರತಾಪ್ ಸಿಂಹ, ಇನ್ಸ್‌ಪೆಕ್ಟರ್ ಮತ್ತೊಮ್ಮೆ ಆ ರೀತಿಯಲ್ಲಿ ಮಾತನಾಡಿದರೆ ಪೊಲೀಸ್ ಠಾಣೆಗೆ ನುಗ್ಗುವುದಾಗಿ ಎಚ್ಚರಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ಸ್‌ಪೆಕ್ಟರ್‌ ರೋಡ್‌ಸೈಡ್ ತರ್ಲೆ ರೀತಿ ಮಾತನಾಡಿದ್ದಾರೆ ಎಂದು ಹೇಳಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page