
ಉಡುಪಿ: ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಶಕ್ಕೆ ಪಡೆದ ಇಬ್ಬರನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರದೀಪ್ ಪೂಜಾರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೆರ್ಡೂರಿನ ದಿಲೀಪ್ ಕುಮಾರ್ ನೀಡಿದ ದೂರಿನ ಮೇರೆಗೆ ಹೊರರಾಜ್ಯದ ಇಬ್ಬರು ಕಾರ್ಮಿಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ತನಿಖೆ ಮುಂದುವರಿದಿದೆ.

























