30.2 C
Udupi
Saturday, October 10, 2026
spot_img
spot_img
HomeBlogರೈಲ್ವೆ ಇಲಾಖೆಯಲ್ಲಿ 3,548 ಹುದ್ದೆಗಳ ನೇಮಕಾತಿ ಪ್ರಕಟಣೆ: ಪದವೀಧರರಿಗೆ ಸುವರ್ಣಾವಕಾಶ

ರೈಲ್ವೆ ಇಲಾಖೆಯಲ್ಲಿ 3,548 ಹುದ್ದೆಗಳ ನೇಮಕಾತಿ ಪ್ರಕಟಣೆ: ಪದವೀಧರರಿಗೆ ಸುವರ್ಣಾವಕಾಶ

ನವದೆಹಲಿ: ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಪದವೀಧರರಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಸಿಹಿ ಸುದ್ದಿ ನೀಡಿದೆ. ನಾನ್-ಟೆಕ್ನಿಕಲ್ ಪಾಪ್ಯುಲರ್ ಕ್ಯಾಟಗರಿ (NTPC) ಅಡಿಯಲ್ಲಿ ಒಟ್ಟು 3,548 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಒಟ್ಟು 3,548 ಹುದ್ದೆಗಳಲ್ಲಿ ಚೀಫ್ ಕಮರ್ಷಿಯಲ್-ಕಮ್-ಟಿಕೆಟ್ ಸೂಪರ್‌ವೈಸರ್ ಹುದ್ದೆಗಳು 127, ಗೂಡ್ಸ್ ಟ್ರೈನ್ ಮ್ಯಾನೇಜರ್ 2,750, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್-ಕಮ್-ಟೈಪಿಸ್ಟ್ 300 ಹಾಗೂ ಸೀನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್ 371 ಹುದ್ದೆಗಳು ಸೇರಿವೆ.

ಬೆಂಗಳೂರು ಆರ್‌ಆರ್‌ಬಿ ವಲಯದಲ್ಲಿ ಒಟ್ಟು 346 ಹುದ್ದೆಗಳಿದ್ದು, ಗೂಡ್ಸ್ ಟ್ರೈನ್ ಮ್ಯಾನೇಜರ್ 301, ಸೀನಿಯರ್ ಕ್ಲರ್ಕ್ 32, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ 10 ಹಾಗೂ ಚೀಫ್ ಕಮರ್ಷಿಯಲ್ ಸೂಪರ್‌ವೈಸರ್ 3 ಹುದ್ದೆಗಳು ಲಭ್ಯವಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. 2027ರ ಜನವರಿ 1ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ವಯಸ್ಸು 18ರಿಂದ 33 ವರ್ಷಗಳ ನಡುವೆ ಇರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 8, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 6, 2026, ರಾತ್ರಿ 11:59ರವರೆಗೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಶುಲ್ಕ:

ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಆರ್‌ಆರ್‌ಬಿಯ ಅಧಿಕೃತ ಆನ್‌ಲೈನ್ ಅರ್ಜಿ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕವಿದ್ದು, ಮೊದಲ ಹಂತದ ಸಿಬಿಟಿ ಪರೀಕ್ಷೆಗೆ ಹಾಜರಾದ ಬಳಿಕ ₹400 ಮರುಪಾವತಿಯಾಗುತ್ತದೆ. ಎಸ್‌ಸಿ, ಎಸ್‌ಟಿ, ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹250 ಶುಲ್ಕವಿದ್ದು, ಪರೀಕ್ಷೆಗೆ ಹಾಜರಾದ ಬಳಿಕ ಪೂರ್ಣ ಮೊತ್ತ ಮರುಪಾವತಿಯಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ?:

ಆಯ್ಕೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳಾದ ಸಿಬಿಟಿ-1 ಮತ್ತು ಸಿಬಿಟಿ-2, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ನಡೆಯಲಿದೆ. ಟೈಪಿಂಗ್ ಅಥವಾ ಆಪ್ಟಿಟ್ಯೂಡ್ ಪರೀಕ್ಷೆ ಇರುವುದಿಲ್ಲ ಎಂದು ನೀಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಸಿಬಿಟಿ-1 ಪರೀಕ್ಷೆಯಲ್ಲಿ 100 ಪ್ರಶ್ನೆಗಳಿಗೆ 100 ಅಂಕಗಳಿದ್ದು, ಸಾಮಾನ್ಯ ಅರಿವು 40, ಗಣಿತ 30 ಮತ್ತು ರೀಸನಿಂಗ್ 30 ಪ್ರಶ್ನೆಗಳಿರುತ್ತವೆ. ಪರೀಕ್ಷೆಯ ಅವಧಿ 90 ನಿಮಿಷಗಳು.

ಸಿಬಿಟಿ-2 ಪರೀಕ್ಷೆಯಲ್ಲಿ 120 ಪ್ರಶ್ನೆಗಳಿಗೆ 120 ಅಂಕಗಳಿದ್ದು, ಸಾಮಾನ್ಯ ಅರಿವು 50, ಗಣಿತ 35 ಮತ್ತು ರೀಸನಿಂಗ್ 35 ಪ್ರಶ್ನೆಗಳಿರುತ್ತವೆ. ಎರಡೂ ಪರೀಕ್ಷೆಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/3 ಅಂಕ ಕಡಿತವಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page