26 C
Udupi
Monday, November 2, 2026
spot_img
spot_img
HomeBlogರಾಜಕೀಯದಲ್ಲಿ ಮಹಿಳೆಯರನ್ನು ಕರಿಬೇವು ಸೊಪ್ಪಿನಂತೆ ಬಳಸಿಕೊಳ್ಳಲಾಗುತ್ತಿದೆ: ಸಿ. ಮೋಟಮ್ಮ

ರಾಜಕೀಯದಲ್ಲಿ ಮಹಿಳೆಯರನ್ನು ಕರಿಬೇವು ಸೊಪ್ಪಿನಂತೆ ಬಳಸಿಕೊಳ್ಳಲಾಗುತ್ತಿದೆ: ಸಿ. ಮೋಟಮ್ಮ

ಹಾಸನ: ರಾಜಕೀಯದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡದೆ, ಕೇವಲ ಹೆಸರಿಗಷ್ಟೇ ಬಳಸಿಕೊಳ್ಳಲಾಗುತ್ತಿದೆ. ಮಹಿಳೆಯರನ್ನು ಪ್ರಮುಖ ನಿರ್ಧಾರ ಕೈಗೊಳ್ಳುವ ಹುದ್ದೆಗಳಿಂದ ದೂರವಿಟ್ಟು, ‘ಕರಿಬೇವು ಸೊಪ್ಪಿನಂತೆ’ ಪರಿಗಣಿಸಲಾಗುತ್ತಿದೆ ಎಂದು ಮಾಜಿ ಸಚಿವೆ ಸಿ. ಮೋಟಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡುವ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದು ವಿಷಾದನೀಯ. ಸಂಸತ್ತಿನಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿದ್ದರೂ ರಾಜಕೀಯ ಪಕ್ಷಗಳ ನಿಲುವಿನಲ್ಲಿ ಬದಲಾವಣೆಯಾಗಿಲ್ಲ ಎಂದು ಟೀಕಿಸಿದರು.

ಮಹಿಳೆಯರಿಗೆ ಆಡಳಿತ ನಡೆಸುವ ಅವಕಾಶ ನೀಡಿದರೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬಲ್ಲರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮಗೆ ಸಚಿವ ಸ್ಥಾನ ನೀಡಿದಾಗ ಸಮರ್ಥವಾಗಿ ಕಾರ್ಯನಿರ್ವಹಿಸಿ ಸಾಬೀತುಪಡಿಸಿದ್ದೇನೆ. ಮಹಿಳಾ ನಾಯಕಿಯರು ಈ ವಿಚಾರವಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿ ಮಳೆ ಕೊರತೆ, ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ನಾಯಕರು ಸ್ಟಿಂಗ್ ಆಪರೇಷನ್ ವಿವಾದದಲ್ಲಿ ಕಾಲಹರಣ ಮಾಡುವುದು ಸರಿಯಲ್ಲ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿವಾದಗಳ ಬದಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಮನ್ವಯ ಸಾಧಿಸಿ ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಸ್ಟಿಂಗ್ ಆಪರೇಷನ್ ಹೊಸ ವಿಚಾರವೇನಲ್ಲ. ಈ ಹಿಂದೆ ಕೂಡ ಗುಪ್ತಚರ ವ್ಯವಸ್ಥೆ ಹಾಗೂ ದೂರವಾಣಿ ಕದ್ದಾಲಿಕೆ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಇಂತಹ ಕಾರ್ಯಾಚರಣೆಗಳಿಗೆ ಮಹಿಳೆಯರನ್ನು ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮೋಟಮ್ಮ ಆಕ್ರೋಶ ವ್ಯಕ್ತಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page