
ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ವತಿಯಿಂದ ತೆಲಂಗಾಣದಲ್ಲಿ ಇದೇ ಜೂನ್08 ರಿಂದ 11 ವರೆಗೆ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ರಾಜ್ಯ ತೀರ್ಪುಗಾರರು ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್ ನ ಉಡುಪಿ ಜಿಲ್ಲಾ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಮತ್ತು ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಚೇತನ್ ಕುಮಾರ್ ಪಿ. ರವರು ಭಾಗವಹಿಸಿ ತೇರ್ಗಡೆಯನ್ನು ಹೊಂದಿರುತ್ತಾರೆ ಮತ್ತು ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ತೇರ್ಗಡೆ ಹೊಂದಿದ ಇರ್ವರಿಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ಉಡುಪಿ ಜಿಲ್ಲಾ ತೀರ್ಪುಗಾರರು ಅಭಿನಂದನೆ ಸಲ್ಲಿಸಿದ್ದಾರೆ.





















































































