
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ RCB ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್ ಹಾಗೂ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.





