ಸೆ.6ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ, ಇವರ ಆಶ್ರಯದಲ್ಲಿ, ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ಹಾಗೂ ರೋಟರಾಕ್ಟ್ ಕ್ಲಬ್ ಕಾರ್ಕಳ ಇವರ ಸಹಕಾರದೊಂದಿಗೆ ಸೆಪ್ಟೆಂಬರ್ 6, 2026ರಂದು (ಭಾನುವಾರ) ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30ರವರೆಗೆ ಕಾರ್ಕಳದ ಸರ್ಕಾರಿ ಸಂಯುಕ್ತ ಸುಂದರ ಪುರಾಣಿಕ ಪ್ರೌಢಶಾಲೆ ಪೆರ್ವಾಜೆಯ ಆವರಣದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನಲ್ಲಿ ದುರ್ಮಾಂಸ, ದೃಷ್ಟಿ ಕಡಿಮೆ, ಕೆಂಪು ಕಣ್ಣು, ಕಣ್ಣಿನಲ್ಲಿ ಪೊರೆ ಇತ್ಯಾದಿ ವಿಭಾಗಗಳ ತಪಾಸಣೆ ನಡೆಸಲಾಗುವುದು. ತಪಾಸಣೆಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶಸ್ತ್ರಚಿಕಿತ್ಸೆ ಉಚಿತವಾಗಿದ್ದು, ಆರೋಗ್ಯ ವಿಮೆ ಇರುವ ಫಲಾನುಭವಿಗಳಿಗೆ ವಿಮೆಯಡಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.
ಸಾರ್ವಜನಿಕರು ಈ ಉಚಿತ ಶಿಬಿರದ ಪ್ರಯೋಜನ ಪಡೆದು ತಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.




































