
ನವದೆಹಲಿ: 1925 ರಲ್ಲಿ ವಿಜಯದಶಮಿಯಂದು ಸ್ಥಾಪನೆಯಾದ ಆರ್ ಎಸ್ಎಸ್ ಗುರುವಾರ ನೂರು ವರ್ಷಗಳನ್ನು ಪೂರೈಸಲಿದ್ದು ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ನೆನಪಿಗಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಈ ವಾರ ಬಿಡುಗಡೆ ಮಾಡಲಿದ್ದಾರೆ.
ಆರ್ ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ಬುಧವಾರ ಮೋದಿಯವರು ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.



















