
ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ (S.V.T) ನ ಶ್ರೀ ನಿಧಿ ನಾಯಕ್ ರವರು ಮಂಗಳೂರು ವಿಶ್ವ ವಿದ್ಯಾನಿಲಯದ ವತಿಯಿಂದ ನಡೆದ ಬಿ. ಕಾಂ. ಪದವಿ ಪರೀಕ್ಷೆಯಲ್ಲಿ 8 ನೇ ರ್‍ಯಾಂಕ್ ಪಡೆದಿರುತ್ತಾರೆ.
ಇವರು ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿರುತ್ತಾರೆ. ಮಾತ್ರವಲ್ಲದೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.