24 C
Udupi
Tuesday, November 17, 2026
spot_img
spot_img
HomeBlogಶಾಲಾ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಅರಿವು ಮೂಡಿಸಿದ "ಸ್ವಚ್ಛ ಕಾರ್ಕಳ ಬ್ರಿಗೇಡ್"

ಶಾಲಾ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಅರಿವು ಮೂಡಿಸಿದ “ಸ್ವಚ್ಛ ಕಾರ್ಕಳ ಬ್ರಿಗೇಡ್”

ಕಾರ್ಕಳ, ನವೆಂಬರ್ 16: ಶಾಲಾ ಮಕ್ಕಳಲ್ಲಿ ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸ್ವಚ್ಛ ಕಾರ್ಕಳ ಬ್ರಿಗೇಡ್ (ರಿ), ಕಾರ್ಕಳ ವತಿಯಿಂದ ಮಾಳದ ಗುರುಕುಲ ಶಾಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಡುಬೆಟ್ಟು ಇಲ್ಲಿ ಸ್ವಚ್ಛತಾ ಸಂವಾದ ಹಾಗೂ ಜೀವಜಲ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ, ಶಾಲಾ ಪರಿಸರದ ನೈರ್ಮಲ್ಯ, ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆ, ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು, ಪರಿಸರ ಸಂರಕ್ಷಣೆ, ನೀರಿನ ಮಿತಬಳಕೆ ಹಾಗೂ ಜಲಮೂಲಗಳ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಲಾಯಿತು.

ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಬಟ್ಟೆಯ ಚೀಲಗಳನ್ನು (Cotton Bags) ಪರಿಚಯಿಸಿ, ಅವುಗಳ ಉಪಯೋಗ ಹಾಗೂ ಪರಿಸರ ಸ್ನೇಹಿ ಗುಣಗಳ ಬಗ್ಗೆ ವಿವರಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಪೋಷಕರಿಗೂ ಬಟ್ಟೆಯ ಚೀಲಗಳ ಬಳಕೆಯ ಮಹತ್ವವನ್ನು ತಿಳಿಸುವಂತೆ ಹಾಗೂ ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳುವಾಗ ಬಟ್ಟೆಯ ಚೀಲಗಳನ್ನು ಕೊಂಡೊಯ್ಯುವ ಅಭ್ಯಾಸವನ್ನು ಕುಟುಂಬದ ಸದಸ್ಯರಲ್ಲಿ ಬೆಳೆಸುವಂತೆ ಪ್ರೇರೇಪಿಸಲಾಯಿತು. ಪರಿಸರ ಸ್ನೇಹಿ ಜೀವನಶೈಲಿಯ ಬದಲಾವಣೆ ಪ್ರತಿಯೊಂದು ಮನೆಯಿಂದಲೇ ಆರಂಭವಾಗಬೇಕು ಎಂಬ ಸಂದೇಶವನ್ನು ಸಾರಲಾಯಿತು.

ಕಾರ್ಯಕ್ರಮವನ್ನು ಕೇವಲ ಮಾಹಿತಿ ನೀಡುವ ಕಾರ್ಯಕ್ರಮವಾಗಿ ಸೀಮಿತಗೊಳಿಸದೆ, ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಸಂವಾದಾತ್ಮಕವಾಗಿ ನಡೆಸಲಾಯಿತು. ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ ಹಾಗೂ ಜಲಸಂರಕ್ಷಣೆಗೆ ಸಂಬಂಧಿಸಿದಂತೆ ವಿಶೇಷ ಪ್ರಶ್ನೋತ್ತರ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರಶ್ನೆಗಳಿಗೆ ಉತ್ತರಿಸುವುದರ ಜೊತೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಅವರ ಕುತೂಹಲ ಮತ್ತು ಆಸಕ್ತಿಗೆ ಅನುಗುಣವಾಗಿ ವಿವಿಧ ವಿಷಯಗಳನ್ನು ಸರಳವಾಗಿ ವಿವರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರು ಕೂಡ ಕಾರ್ಯಕ್ರಮಕ್ಕೆ ಉತ್ತಮ ಸಹಕಾರ ಮತ್ತು ಪ್ರೋತ್ಸಾಹ ನೀಡಿದರು. ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಹಾಗೂ ಪರಿಸರ ಸಂರಕ್ಷಣೆಯ ಸಂದೇಶವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೇಪಿಸುವಲ್ಲಿ ಶಿಕ್ಷಕರ ಬೆಂಬಲ ಮಹತ್ವದ ಪಾತ್ರ ವಹಿಸಿತು.

ಜೀವಜಲ ಅಭಿಯಾನದ ಅಂಗವಾಗಿ ನೀರಿನ ಪ್ರತಿಯೊಂದು ಹನಿಯೂ ಅಮೂಲ್ಯವಾಗಿದ್ದು, ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಬೇಕು. ಕೆರೆ, ಬಾವಿ, ನದಿ ಸೇರಿದಂತೆ ನಮ್ಮ ಸುತ್ತಮುತ್ತಲಿನ ಜಲಮೂಲಗಳಿಗೆ ಕಸ ಹಾಗೂ ಅನಗತ್ಯ ತ್ಯಾಜ್ಯಗಳನ್ನು ಎಸೆಯದೆ ಅವುಗಳನ್ನು ಸ್ವಚ್ಛವಾಗಿರಿಸಬೇಕು ಎಂಬುದರ ಕುರಿತು ಅರಿವು ಮೂಡಿಸಲಾಯಿತು. ಮುಂದಿನ ಪೀಳಿಗೆಗೆ ಶುದ್ಧ ನೀರಿನ ಸಂಪನ್ಮೂಲಗಳನ್ನು ಉಳಿಸಿಕೊಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಅಲ್ಲದೆ, ಬೇಸಿಗೆಯ ಸಂದರ್ಭದಲ್ಲಿ ಪಕ್ಷಿಗಳು ಮತ್ತು ಪ್ರಾಣಿಗಳ ದಾಹ ತಣಿಸಲು ಮನೆಯ ಸುತ್ತಮುತ್ತ ನೀರಿನ ಪಾತ್ರೆಗಳನ್ನು ಇರಿಸುವಂತೆ ತಿಳಿಸಲಾಯಿತು. ಮನುಷ್ಯರಷ್ಟೇ ಅಲ್ಲದೆ, ಪ್ರಕೃತಿಯಲ್ಲಿರುವ ಪ್ರತಿಯೊಂದು ಜೀವಿಗೂ ನೀರು ಅತ್ಯಗತ್ಯ ಎಂಬ ಜೀವಪರ ಕಾಳಜಿಯನ್ನು ಮಕ್ಕಳಲ್ಲಿ ಬೆಳೆಸುವ ಪ್ರಯತ್ನ ಮಾಡಲಾಯಿತು.

ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸ್ವಚ್ಛತೆಯ ಅಭ್ಯಾಸ, ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಹಾಗೂ ಜಲಸಂರಕ್ಷಣೆಯ ಜವಾಬ್ದಾರಿಯನ್ನು ಬೆಳೆಸುವ ಮೂಲಕ ಭವಿಷ್ಯದಲ್ಲಿ ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ತಂಡದ ಸದಸ್ಯರಾದ ಮನಿಷಾ ಕಾಮತ್, ಶ್ರೀನಿವಾಸ್ ಸುಧಾಳ ಹಾಗೂ ಪ್ರಕಾಶ್ ರಾವ್ ಭಾಗವಹಿಸಿದ್ದರು. ಎರಡೂ ಶಾಲೆಗಳ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಹಾಗೂ ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page