24.7 C
Udupi
Wednesday, September 30, 2026
spot_img
spot_img
HomeBlogಸಾಲದ ಕಂತಿಗೆ ಗೃಹಲಕ್ಷ್ಮಿ ಹಣ ಬಳಸುವಂತಿಲ್ಲ: ಬ್ಯಾಂಕ್‌ಗಳಿಗೆ ಖಡಕ್ ಸೂಚನೆ

ಸಾಲದ ಕಂತಿಗೆ ಗೃಹಲಕ್ಷ್ಮಿ ಹಣ ಬಳಸುವಂತಿಲ್ಲ: ಬ್ಯಾಂಕ್‌ಗಳಿಗೆ ಖಡಕ್ ಸೂಚನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಹಣವನ್ನು ಸಾಲದ ಕಂತು ಅಥವಾ ಬಡ್ಡಿ ಪಾವತಿಗೆ ಕಡಿತ ಮಾಡದಂತೆ ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಜಾರಿಗೊಂಡಿರುವ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹ 2,000 ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ. ಈ ಮೊತ್ತವು ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ ಸೇರಿದಂತೆ ವಿವಿಧ ಅಗತ್ಯಗಳಿಗೆ ನೆರವಾಗುತ್ತಿದೆ.

ಆದರೆ, ಕೆಲ ವಾಣಿಜ್ಯ ಬ್ಯಾಂಕ್‌ಗಳು, ಖಾಸಗಿ ಫೈನಾನ್ಸ್‌ ಕಂಪನಿಗಳು, ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಹಾಗೂ ಸಂಘಗಳು ಗೃಹಲಕ್ಷ್ಮಿ ಹಣ ಖಾತೆಗೆ ಜಮೆಯಾದ ಕೂಡಲೇ ಹಳೆಯ ಸಾಲ ಅಥವಾ ಬಡ್ಡಿಯ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಕೆಲವು ಪ್ರಕರಣಗಳಲ್ಲಿ ಫಲಾನುಭವಿಗಳ ಗಮನಕ್ಕೂ ತರದೆ ಹಣ ಕಡಿತ ಮಾಡಲಾಗುತ್ತಿದೆ ಎಂದು ದಿನೇಶ್ ಗೂಳಿಗೌಡ ಅವರು ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣವನ್ನು ಮಹಿಳೆಯರ ಕುಟುಂಬದ ಮೂಲಭೂತ ಅಗತ್ಯಗಳಿಗೆ ಬಳಸಬೇಕೇ ಹೊರತು ಸಾಲ ವಸೂಲಾತಿಗೆ ಬಳಸಬಾರದು. ಇಂತಹ ಕಡಿತದಿಂದ ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ತೊಂದರೆಯಾಗುತ್ತಿದ್ದು, ಯೋಜನೆಯ ಉದ್ದೇಶಕ್ಕೂ ಧಕ್ಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್‌ಗಳ ಪರಿಶೀಲನಾ ಸಮಿತಿ (DLRC) ಸಭೆಗಳಲ್ಲೂ ಈ ವಿಚಾರ ಚರ್ಚೆಯಾಗಿದ್ದು, ಗೃಹಲಕ್ಷ್ಮಿ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಬಾರದು ಎಂದು ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page