
ಮಂಗಳೂರು: ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕಿ ಸವಿತ ಎಂ ಭಟ್ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಕಂಪನಿಯ ವತಿಯಿಂದ ನೀಡಲಾಗುವ ‘ಕಲಾ ರತ್ನ’ ಪ್ರಶಸ್ತಿಯನ್ನು ಇಂದು ಮಂಗಳೂರಿನ ಕಂಪನಿಯ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸವಿತ ಎಂ ಭಟ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

























