
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲಾ ಪಂಚಾಯತ್ ಇವರಿಂದ ನಡೆದ ಕಾರ್ಕಳ ತಾಲೂಕಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಕಿರಿಯ ಕಾಲೇಜಿನಲ್ಲಿ ನಡೆಯಿತು. ಇದರಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲೆಯ 38 ವಿದ್ಯಾರ್ಥಿಗಳು ಭಾಗವಹಿಸಿದ್ದು 34 ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಗಳಿಸಿದರು. ಈ ಪ್ರಶಸ್ತಿಗಳಲ್ಲಿ 22 ವಿದ್ಯಾರ್ಥಿಗಳು ಪ್ರಥಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳನ್ನು ಮತ್ತು ಮಕ್ಕಳನ್ನು ತರಬೇತಿಗೊಳಿಸಿದ ಶಿಕ್ಷಕರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಹಾಗೂ ಪೋಷಕ ವರ್ಗ ದವರು ಮನದುಂಬಿ ಅಭಿನಂದಿಸಿದ್ದಾರೆ.






















































































