ನ.1ರಂದು ಪೂರ್ವಭಾವಿ ಸಭೆ

ಸಾಣೂರು: ನವೆಂಬರ್ 14 ಶನಿವಾರದಂದು ನಡೆಯುವ ಸೇಣರಬೆಟ್ಟು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ನವೆಂಬರ್ 1ರಂದು ಬೆಳಿಗ್ಗೆ 10.30ಕ್ಕೆ ಜೋಡುಕರೆ ಕಂಬಳದ ಗದ್ದೆಯಲ್ಲಿ ನಡೆಯಲಿದೆ.
ಸಭೆಯಲ್ಲಿ ಕಂಬಳದ ಯಶಸ್ವಿ ಆಯೋಜನೆಗೆ ಅಗತ್ಯವಿರುವ ಸಿದ್ಧತೆಗಳು ಹಾಗೂ ಕಾರ್ಯಕ್ರಮದ ವ್ಯವಸ್ಥೆಗಳ ಕುರಿತು ಚರ್ಚಿಸಲಿದ್ದು ಸಭೆಯಲ್ಲಿ ಕಂಬಳ ಸಮಿತಿಯ ಸದಸ್ಯರು, ಊರಿನ ಗ್ರಾಮಸ್ಥರು ಹಾಗೂ ಕಂಬಳದ ಅಭಿಮಾನಿಗಳು ಭಾಗವಹಿಸಬೇಕೆಂದು ಸಾಣೂರು ಕಂಬಳ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























