32.9 C
Udupi
Thursday, November 26, 2026
spot_img
spot_img
HomeBlog'ಸರ್ಕಾರವನ್ನು ಬೆದರಿಸುವ ಕೆಲಸ ಮಾಡಬೇಡಿ'

‘ಸರ್ಕಾರವನ್ನು ಬೆದರಿಸುವ ಕೆಲಸ ಮಾಡಬೇಡಿ’

10 ದಿನವಾದರೂ ಹೋರಾಟ ಕೈಬಿಡದ ಆಶಾ ಕಾರ್ಯಕರ್ತೆಯರ ವಿರುದ್ಧ ಡಿಕೆಶಿ ಗರಂ!

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಹೋರಾಟ ಮುಂದುವರಿಸಿರುವ ಕಾರ್ಯಕರ್ತೆಯರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬೇಡಿಕೆಗಳ ಬಗ್ಗೆ ಚರ್ಚ ನಡೆಸುತ್ತಿದ್ದರೂ ಪ್ರತಿಭಟನೆ ಕೈಬಿಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಕಾರ್ಯಕರ್ತೆಯರ ಬೇಡಿಕೆಗಳ ಅರಿವಿದ್ದು, ಅವುಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಇಂದು ಅಥವಾ ನಾಳೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಪ್ರತಿಭಟನೆಯನ್ನು ಹಿಂಪಡೆಯುವಂತೆ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು.

ಕೇಂದ್ರ ಸರ್ಕಾರವನ್ನು ಏಕೆ ಪ್ರಶ್ನಿಸುತ್ತಿಲ್ಲ?

ಆಶಾ ಕಾರ್ಯಕರ್ತೆಯರ ನೋವು ಮತ್ತು ಬೇಡಿಕೆಗಳ ಬಗ್ಗೆ ತನಗೆ ಅರಿವಿದೆ ಎಂದ ಅವರು, ರಾಜ್ಯ ಸರ್ಕಾರವನ್ನು ಪ್ರಶ್ನಿಸುವಂತೆ ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಬೇಕು. ಕೇಂದ್ರ ಸರ್ಕಾರ ಅನುದಾನ ನೀಡದಿರುವ ಬಗ್ಗೆ ಏಕೆ ಪ್ರಶ್ನಿಸುತ್ತಿಲ್ಲ ಎಂದು ಕೇಳಿದರು.

ಹೋರಾಟದಲ್ಲಿ ರಾಜಕೀಯ ಮಾಡಲಾಗುತ್ತಿದೆ: ಡಿಕೆಶಿ

ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಕೆಲವರು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು. ಪ್ರತಿಭಟನೆಯ ಮೂಲಕ ಸರ್ಕಾರವನ್ನು ಬೆದರಿಸುವ ಪ್ರಯತ್ನ ಮಾಡಬಾರದು. ಯುಪಿಎ ಸರ್ಕಾರದ ಅವಧಿಯಲ್ಲಿ ಗೌರವಧನ ಹೆಚ್ಚಳವಾಗಿರಲಿಲ್ಲ. ನಾವೇ ಹಂತ ಹಂತವಾಗಿ ಹೆಚ್ಚಿಸುತ್ತಾ ಬಂದಿದೆ ಎಂದು ಹೇಳಿದರು.

ಹಣಕಾಸು ಇಲಾಖೆಯೊಂದಿಗೆ ಐದಾರು ಸುತ್ತಿನ ಚರ್ಚೆ ನಡೆಸಲಾಗಿದೆ. ಇದು ಒಂದೇ ಇಲಾಖೆಗೆ ಸಂಬಂಧಿಸಿದ ನಿರ್ಧಾರವಲ್ಲ. ಎಲ್ಲರೂ ಪ್ರತಿಭಟನೆಗೆ ಇಳಿದರೆ ಆಡಳಿತ ನಡೆಸುವುದು ಕಷ್ಟವಾಗುತ್ತದೆ. ಪ್ರತಿಯೊಬ್ಬರ ಜೀವನವೂ ಮುಖ್ಯವಾಗಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ತಾಳ್ಮೆಯಿಂದ ಪ್ರತಿಭಟನೆ ಹಿಂಪಡೆಯಬೇಕು. ಸರ್ಕಾರದ ಮೇಲೆ ನಂಬಿಕೆ ಇಡಿ, ನಿಮ್ಮ ಬೇಡಿಕೆಗಳಿಗೆ ಖಂಡಿತ ಪರಿಹಾರ ಒದಗಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page