30.2 C
Udupi
Thursday, October 8, 2026
spot_img
spot_img
HomeBlogಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗನವಾಡಿ ಶಿಕ್ಷಕಿಯರಿಗೆ ಅಭಿನಂದನೆ

ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗನವಾಡಿ ಶಿಕ್ಷಕಿಯರಿಗೆ ಅಭಿನಂದನೆ

ಸಾಣೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆಗೆ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು.

“ಅಂಗನ್ ಕ ಮಿಲನ್” ಕಾರ್ಯಕ್ರಮದ ಅಂಗವಾಗಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಅಂಗನವಾಡಿಗಳ ಶಿಕ್ಷಕಿಯರು ಹಾಗೂ ಸಹಾಯಕಿಯರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಗ್ರಾಮ ಸಮಿತಿ ಅಧ್ಯಕ್ಷರಾದ ಯುವರಾಜ್ ಜೈನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಕೋಟ್ಯಾನ್, ಪಂಚಾಯತ್ ಮಾಜಿ ಅಧ್ಯಕ್ಷ ಕರುಣಾಕರ ಎಸ್. ಕೋಟ್ಯಾನ್, ಮಾಜಿ ಉಪಾಧ್ಯಕ್ಷ ಪ್ರಸಾದ್ ಪೂಜಾರಿ, ಮಾಜಿ ಸದಸ್ಯ ಸತೀಶ್ ಪೂಜಾರಿ, ತಾಲೂಕು ಮಹಿಳಾ ಮೋರ್ಚಾ ಸದಸ್ಯರಾದ ಸರಸ್ವತಿ ಹಾಗೂ ಶಶಿಕಲಾ, ಮಿಯ್ಯಾರು ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಮೀಳಾ, ಪಕ್ಷದ ಪ್ರಮುಖರಾದ ವಿಶ್ವನಾಥ್ ಶೆಟ್ಟಿ, ರಾಘು ಸುವರ್ಣ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ರಾಕೇಶ್ ಅಮೀನ್, ಮಿಯ್ಯಾರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಅಧ್ಯಕ್ಷ ಕಿರಣ್ ಕುಲಾಲ್, ಬೂತ್ ಅಧ್ಯಕ್ಷರಾದ ರವೀಂದ್ರ ಪೂಜಾರಿ, ರಾಜೇಶ್ ಪೂಜಾರಿ ಹಾಗೂ ಗಿರೀಶ್ ಶೆಟ್ಟಿಗಾರ್ ಸೇರಿದಂತೆ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page