31.5 C
Udupi
Tuesday, November 17, 2026
spot_img
spot_img
HomeBlog'ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಿಸುವಂತಿಲ್ಲ': ಕೆಇಎಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ

‘ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಿಸುವಂತಿಲ್ಲ’: ಕೆಇಎಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (CET) ಬರೆಯುವ ವಿದ್ಯಾರ್ಥಿಗಳ ಪವಿತ್ರ ಜನಿವಾರವನ್ನು ತೆಗೆಸುವಂತಿಲ್ಲ. ಅಲ್ಲದೆ, ರಾಜ್ಯಾದ್ಯಂತ ಪರೀಕ್ಷೆಯನ್ನು ಏಕರೂಪವಾಗಿ ಮತ್ತು ಸುಗಮವಾಗಿ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ನಿರ್ದೇಶನ ನೀಡಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

2025ರ ಏಪ್ರಿಲ್ 17ರಿಂದ 19ರವರೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ್ದ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಪರೀಕ್ಷಾ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಸ್ಪಷ್ಟ ಮಾರ್ಗಸೂಚಿ ರೂಪಿಸುವಂತೆಯೂ ಮನವಿ ಮಾಡಲಾಗಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಆಯ್ದ ಪರೀಕ್ಷಾ ಕೇಂದ್ರಗಳಲ್ಲಿ ಅದನ್ನು ತೆಗೆಯುವಂತೆ ಸೂಚಿಸಿ ತಾರತಮ್ಯ ಎಸಗಲಾಗಿದೆ ಎಂದು ವಾದಿಸಿದರು. 2025ರಲ್ಲಿ ಅರ್ಜಿ ಸಲ್ಲಿಸಿದ ಬಳಿಕವೂ ಇಂತಹ ಘಟನೆಗಳು ಮುಂದುವರಿದಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕೆಇಎ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಪರೀಕ್ಷೆಯ ಮುಖ್ಯ ಮೇಲ್ವಿಚಾರಕರಾಗಿದ್ದು, ಅವರಿಗೆ ಸಹಾಯ ಮಾಡಲು ಉಪ ಮುಖ್ಯ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ತಿಳಿಸಿತು.

ಅಲ್ಲದೆ, ಪರೀಕ್ಷೆಯ ಉಡುಗೆ ಸಂಹಿತೆ ಪಾಲಿಸುವುದು ಕಡ್ಡಾಯವಾಗಿದ್ದರೂ, ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಯಾವುದೇ ಸೂಚನೆ ಅಥವಾ ಮಾರ್ಗಸೂಚಿಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿತು. ಇಂತಹ ಘಟನೆಗಳು ಗಮನಕ್ಕೆ ಬಂದಾಗ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿತು.

ಈ ವಿಚಾರವನ್ನು ರಾಜ್ಯ ಮಾನವ ಹಕ್ಕುಗಳ ಆಯೋಗ ಹಾಗೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಗಂಭೀರವಾಗಿ ಪರಿಗಣಿಸಿವೆ.

ಎಲ್ಲ ಅಂಶಗಳನ್ನು ಪರಿಶೀಲಿಸಿದ ಹೈಕೋರ್ಟ್, ಪರೀಕ್ಷಾ ಮೇಲ್ವಿಚಾರಕರಾದ ಆಯುಕ್ತರು ಹಾಗೂ ಉಪ ಅಧೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಬೇಕು. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಏಕರೂಪದ ವ್ಯವಸ್ಥೆ ಕಲ್ಪಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೆಇಎಗೆ ಸೂಚಿಸಿದೆ. ಇದರೊಂದಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page