31 C
Udupi
Sunday, October 25, 2026
spot_img
spot_img
HomeBlogಸಿದ್ದರಾಮಯ್ಯ ಗೌರವದ ಪ್ರಶ್ನೆ, ಯಾರನ್ನೂ ರಕ್ಷಿಸಲ್ಲ: ಪ್ರಿಯಾಂಕ್ ಖರ್ಗೆ

ಸಿದ್ದರಾಮಯ್ಯ ಗೌರವದ ಪ್ರಶ್ನೆ, ಯಾರನ್ನೂ ರಕ್ಷಿಸಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ಟಿಂಗ್ ಕಾರ್ಯಾಚರಣೆಯಲ್ಲಿ ಕ್ರಿಮಿನಲ್ ಪಿತೂರಿ ನಡೆದಿರುವುದು ಸ್ಪಷ್ಟವಾಗಿದೆ. ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕು ಎಂಬ ಉದ್ದೇಶದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ. ಸದ್ಯ ತನಿಖೆ ಪ್ರಾಮಾಣಿಕವಾಗಿ ಹಾಗೂ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವು ಸಿದ್ದರಾಮಯ್ಯ ಅವರ ಗೌರವಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ನಾಯಕರು ಅಥವಾ ಕಾರ್ಯಕರ್ತರು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಯಾರಿಗೂ ರಕ್ಷಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಅಗತ್ಯವಿಲ್ಲ. ಪೊಲೀಸ್ ಅಧಿಕಾರಿಗಳು ಸಮರ್ಥವಾಗಿ ತನಿಖೆ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಪ್ರಕರಣದ ಆರಂಭದಿಂದ ಇಲ್ಲಿಯವರೆಗೆ ನಡೆದಿರುವ ಎಲ್ಲ ಬೆಳವಣಿಗೆಗಳ ಕುರಿತು ಸದ್ಯಕ್ಕೆ ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಕ್ಕಿ ಸಾವು: ದೂರು ಬಂದರೆ ತನಿಖೆ

ಪವರ್ ಟಿವಿಯಲ್ಲಿ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬ ಉದ್ಯೋಗಿಯ ಅನುಮಾನಾಸ್ಪದ ಸಾವಿನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಈ ಸಂಬಂಧ ದೂರು ಸಲ್ಲಿಕೆಯಾದರೆ ಪೊಲೀಸರು ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ವಿಕ್ಕಿ ಸಾವಿನ ಘಟನೆ ಹಳೆಯದ್ದು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಮಾಹಿತಿಯನ್ನು ಆಧರಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಅವರು ದೂರು ನೀಡಿದರೂ ಪ್ರಕರಣವನ್ನು ಮರುಪರಿಶೀಲಿಸಿ ತನಿಖೆ ನಡೆಸಲಾಗುವುದು. ವೈಯಕ್ತಿಕ ದ್ವೇಷವನ್ನು ತೀರಿಸಿಕೊಳ್ಳಲು ಇಂತಹ ಪ್ರಕರಣಗಳನ್ನು ಬಳಸಿಕೊಳ್ಳಬಾರದು ಎಂದು ಅವರು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page