28.1 C
Udupi
Saturday, August 22, 2026
spot_img
spot_img
HomeBlogಶಿಗ್ಗಾಂವಿ: ದೇವಸ್ಥಾನ ಆವರಣದಲ್ಲಿ ಅನ್ಯಕೋಮಿನ ಯುವಕನಿಂದ ಮೂತ್ರ ವಿಸರ್ಜನೆ,

ಶಿಗ್ಗಾಂವಿ: ದೇವಸ್ಥಾನ ಆವರಣದಲ್ಲಿ ಅನ್ಯಕೋಮಿನ ಯುವಕನಿಂದ ಮೂತ್ರ ವಿಸರ್ಜನೆ,

ಆ.26ರಂದು ಬಂದ್‌ಗೆ ಮುತಾಲಿಕ್ ಕರೆ

ಹಾವೇರಿ: ಶಿಗ್ಗಾಂವಿ ಪಟ್ಟಣದ ಐತಿಹಾಸಿಕ ಆಂಜನೇಯ ಸ್ವಾಮಿ ಹಾಗೂ ಬನ್ನಿಮಹಾಕಾಳಿ ದೇವಸ್ಥಾನದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣದ ಆರೋಪಿ ಜಾಫರ್‌ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಆ.26ರಂದು ಈದ್ ಮಿಲಾದ್ ದಿನ ಶಿಗ್ಗಾಂವಿ ಬಂದ್‌ಗೆ ಕರೆ ನೀಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ಇಂತಹ ಕೃತ್ಯ ಎಸಗಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

‘ದೇಗುಲದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದವನನ್ನ ಗುಂಡು ಹಾರಿಸಿ ಕೊಲ್ಲಬೇಕು. ಮಸೀದಿ ಒಳಗೆ ಇದೇ ರೀತಿ ಆಗಿದ್ರೆ ಏನು ಮಾಡುತ್ತಿದ್ರಿ? ಹಾವೇರಿಯಲ್ಲಿ ಪದೇಪದೆ ಹಿಂದೂಗಳನ್ನ ಕೆರಳಿಸ್ತಿದ್ದಾರೆ. ಇದಕ್ಕೆ ಕೆಲವು ‘ಕೈ’ ನಾಯಕರು ಪ್ರೇರಣೆ ಕೊಡುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಜಾಫರ್ ಕೃತ್ಯವೆಸಗಿ ‘ಇದು ಶಾಸಕರಿಗೆ ನೀಡಿದ ಹುಟ್ಟುಹಬ್ಬದ ಗಿಫ್ಟ್’ ಎಂದು ಹೇಳಿಕೆ ನೀಡಿದ್ದಾನೆ. ಶಾಸಕ ಯಾಸಿರ್ ಖಾನ್ ಪಠಾಣ್ ಅವರೇ ಇದಕ್ಕೆ ಏನು ಹೇಳುತ್ತೀರಿ? ಈ ಕೃತ್ಯದಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲದೆ ಸ್ಥಳೀಯ ಮೌಲ್ವಿಗಳು ಹಾಗೂ ನಾಯಕರ ಷಡ್ಯಂತ್ರ ಅಡಗಿದೆ. ಈ ಕೃತ್ಯದ ಹಿಂದೆ ಯಾವುದೇ ಷಡ್ಯಂತ್ರವಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು. ಆರೋಪಿಗೆ ಜಾಮೀನು ನೀಡಬಾರದು ಎಂದು ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಹಿಂದೂಗಳ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ ಮುತಾಲಿಕ್, ಇನ್ನು ಮುಂದೆ ಹಿಂದೂ ಸಮಾಜ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಹಿಂದೂ ಕಾರ್ಯಕರ್ತರು ಗೋಮೂತ್ರ ಬಳಸಿ ದೇವಸ್ಥಾನವನ್ನು ಸ್ವಚ್ಛಗೊಳಿಸಿ, ಬಳಿಕ ವಿಶೇಷ ಪೂಜೆ ನೆರವೇರಿಸಿದ್ದಾರೆ. ಸ್ವಚ್ಛತಾ ಕಾರ್ಯದಲ್ಲಿ ಮುತಾಲಿಕ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page