32.1 C
Udupi
Saturday, November 14, 2026
spot_img
spot_img
HomeBlogಶಿಕ್ಷಕರ ವರ್ಗಾವಣೆ ನಿಯಮದಲ್ಲಿ ಮಹತ್ವದ ಬದಲಾವಣೆ: KPS ಶಾಲೆಗಳಿಗೆ ತೆರಳಿದವರಿಗೆ ವೈಟೇಜ್ ಅಂಕ...!

ಶಿಕ್ಷಕರ ವರ್ಗಾವಣೆ ನಿಯಮದಲ್ಲಿ ಮಹತ್ವದ ಬದಲಾವಣೆ: KPS ಶಾಲೆಗಳಿಗೆ ತೆರಳಿದವರಿಗೆ ವೈಟೇಜ್ ಅಂಕ…!

ಬೆಂಗಳೂರು:ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಗಳಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರಡು ಅಧಿಸೂಚನೆಯನ್ನು ಶುಕ್ರವಾರ ಪ್ರಕಟಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ (KPS) ವರ್ಗಾವಣೆಯಾಗುವ ಶಿಕ್ಷಕರಿಗೆ ವೈಟೇಜ್ ಅಂಕ ನೀಡಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹೊಸ ನಿಯಮದಂತೆ, ನಿರ್ಣಾಯಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಒಂದೇ ಸ್ಥಳದಲ್ಲಿ ಕನಿಷ್ಠ 9 ವರ್ಷ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ. ಒಂದೇ ಶಾಲೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸುವುದರಿಂದ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಹಾಗೂ ಅವರ ಕಲಿಕಾ ಸಾಮರ್ಥ್ಯಕ್ಕೆ ತಕ್ಕಂತೆ ಬೋಧನೆ ಮಾಡಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ತಾಲೂಕು ಮಟ್ಟದ ಖಾಲಿ ಹುದ್ದೆಗಳ ವರ್ಗಾವಣೆಗೆ ಸಂಬಂಧಿಸಿದ ಶೇಕಡಾವಾರು ಮಿತಿಯನ್ನು ಶೇ.25ರಷ್ಟು ಸಡಿಲಗೊಳಿಸಲಾಗಿದ್ದು, ಇದರಿಂದ ಶಿಕ್ಷಕರಿಗೆ ವರ್ಗಾವಣೆಯ ಹೆಚ್ಚಿನ ಅವಕಾಶ ದೊರೆಯಲಿದೆ.

ಅಲ್ಲದೆ, ಗರ್ಭಿಣಿ ಶಿಕ್ಷಕಿಯರು ಹಾಗೂ ಐದು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಮತ್ತು ಅಂಗವೈಕಲ್ಯ ಹೊಂದಿರುವ ಶಿಕ್ಷಕರಿಗೂ ಮಾನವೀಯ ದೃಷ್ಟಿಯಿಂದ ಅನುಕೂಲ ಕಲ್ಪಿಸಲಾಗಿದೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ ಮಾಡಿರುವ ಈ ಬದಲಾವಣೆಗಳನ್ನು ಶಿಕ್ಷಕ ಸಮುದಾಯ ಸಕಾರಾತ್ಮಕವಾಗಿ ಸ್ವೀಕರಿಸಲಿದೆ ಎಂಬ ವಿಶ್ವಾಸವಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page