
ಮಂಗಳೂರು:ಶಿಕ್ಷಕರಾದ ಭವ್ಯ ಜೋಡುರಸ್ತೆ ಕಾರ್ಕಳ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಕಂಪನಿಯ ವತಿಯಿಂದ ನೀಡಲಾಗುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಇಂದು ಮಂಗಳೂರಿನ ಕಂಪನಿಯ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಭವ್ಯ ಜೋಡುರಸ್ತೆ ಕಾರ್ಕಳ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

























