28.1 C
Udupi
Wednesday, September 23, 2026
spot_img
spot_img
HomeBlogಶ್ರೀ ಭುವನೇಂದ್ರ ಕಾಲೇಜು ಕಾರ್ಕಳ:ಯುವನಿಧಿ ಕಾರ್ಯಕ್ರಮ

ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ:ಯುವನಿಧಿ ಕಾರ್ಯಕ್ರಮ

ಕಾರ್ಕಳ: ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಉಡುಪಿ,ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇದರ ಯುವನಿಧಿ ಮಾಹಿತಿ ಕಾರ್ಯಾಗಾರ ಹಾಗೂ ಕೌಶಲ್ಯ ಮತ್ತು ಉದ್ಯೋಗ ಮಾಹಿತಿ ಕಾರ್ಯಕ್ರಮವು ಭುವನೇಂದ್ರ ಕಾಲೇಜಿನ ಐಕ್ಯೂಎಸಿ ಮತ್ತು ಉದ್ಯೋಗ ಮಾಹಿತಿ ಕೋಶ ಇದರ ಸಹಯೋಗದೊಂದಿಗೆ ನೆರವೇರಿತು.
ಕರ್ನಾಟಕ ಸರಕಾರದ ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ, ಮುನಿಯಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಹೊರೆಯನ್ನು ತಗ್ಗಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ತಂದ ಜನಪರ ಕಾರ್ಯಕ್ರಮಗಳಾಗಿವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಇಂತಹ ಯೋಜನೆಗಳು ತಲುಪಬೇಕೆನ್ನುವುದು ನಮ್ಮ ಆಶಯ.ಯುವನಿಧಿಯಂತಹ ಯೋಜನೆಗಳು ನಿರುದ್ಯೋಗಿ ಯುವಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುತ್ತದೆ ಅನ್ನುವ ವಿಶ್ವಾಸವಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.


ಕಾರ್ಕಳ ತಾಲೂಕು ಯುವನಿಧಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ, ಮಾಳ ಮಾತನಾಡುತ್ತಾ, ನಮ್ಮ ಸರಕಾರ ಹಮ್ಮಿಕೊಂಡ ಈ ಯೋಜನೆಯ ಫಲಾನುಭವಿಗಳು ಕಾರ್ಕಳ ತಾಲೂಕಿನಲ್ಲಿಯೇ ಸಾಕಷ್ಟಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮ ಸರಕಾರದ ಆಶೋತ್ತರಗಳನ್ನು ಮರು ರೂಪಿಸಿ ಜನರಿಗೆ ತಲುಪಿಸುವುದರಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಫಲಾನುಭವಿಗಳು ಕೂಡಾ ಯೋಜನೆಗಳ ಜೊತೆಗೆ ಸ್ಪಂದಿಸಬೇಕು ಎಂದು ಹೇಳಿದರು.
ಮತ್ತೋರ್ವ ಮುಖ್ಯ ಅತಿಥಿ, ಕಾರ್ಕಳ ತಾಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿ, ಪ್ರಶಾಂತ್ ರಾವ್ ಇವರು, ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಆಕರ್ಷಿತರಾಗಬೇಕು. ಈ ಮೂಲಕ ಸ್ಪರ್ಧಾ ಜಗತ್ತನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಉಡುಪಿ ಜಿಲ್ಲಾಧಿಕಾರಿಗಳ ಉದ್ಯೋಗ ವಿನಿಮಯ ಕೇಂದ್ರದ, ಆಪ್ತ ಸಮಾಲೋಚಕಿ ಲಕ್ಷ್ಮೀ ಸುವರ್ಣ ಇವರು ಯುವನಿಧಿಗೆ ಸಂಬಂಧಿಸಿದ ಸಮಗ್ರ ಯೋಜನೆಗಳ ಕುರಿತ ಮಾಹಿತಿ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್ ಮಾತನಾಡಿ, ವಿದ್ಯಾರ್ಥಿಗಳು ಕನಸುಗಳನ್ನು ಕಾಣುವುದರ ಜೊತೆಗೆ ಆ ಕನಸುಗಳನ್ನು ಪೂರ್ಣಗೊಳಿಸುವ ದಾರಿಯಲ್ಲೂ ತೊಡಗಿಕೊಂಡಿರಬೇಕು. ನಮ್ಮ ಭುವನೇಂದ್ರ ಸಂಸ್ಥೆ ಒಂದು ಪರಂಪರೆಯನ್ನು ಬೆಳೆಸಿಕೊಂಡು ಬಂದ ಸಂಸ್ಥೆ. ಇಂತಹ ಅವಕಾಶಗಳನ್ನು ಅದು ಒದಗಿಸಿದಾಗ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಭವಿಷ್ಯದಲ್ಲಿ ನೀವು ಪಡಕೊಂಡ ಯೋಜನೆಗಳನ್ನು ನಿಮ್ಮ ನಂತರದ ತಲೆಮಾರಿಗೂ ದಾಟಿಸಬೇಕು. ಆತ್ಮಸ್ಥೈರ್ಯ ಕಳೆದುಕೊಳ್ಳದೆ ಉದ್ಯೋಗವನ್ನು ಪಡೆದುಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.
ವೇದಿಕೆಯಲ್ಲಿ, ಉಡುಪಿ ಜಿಲ್ಲಾ ಸಮಿತಿಯ ಉದ್ಯೋಗ ಮಾಹಿತಿ ಕಾರ್ಯನಿರ್ವಾಹಕರಾದ ಕು. ಲತಾ , ಐಕ್ಯೂಎಸಿ ಸಂಯೋಜಕರಾದ ಪ್ರೊ. ಲಕ್ಷ್ಮೀನಾರಾಯಣ ಕೆ. ಎಸ್., ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿ ಡಾ. ವಿಜಯ ಕುಮಾರಿ ಉಪಸ್ಥಿತರಿದ್ದರು.
ಕಾಲೇಜಿನ ಉದ್ಯೋಗ ಮಾಹಿತಿ ಕೋಶದ ಸಂಯೋಜಕರಾದ ಮಹೇಶ್ ಶೆಟ್ಟಿ ಸ್ವಾಗತಿಸಿದರು.ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಯೋಜಕಿ,ಜಾಯ್ಲಿನ್ ವಂದನಾ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page