
ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರ, ಕಾರ್ಕಳದಲ್ಲಿ ದಿನಾಂಕ 03/11/2026ರಂದು ಬಾಲಮಂದಿರದ ವಾರ್ಷಿಕ ಕ್ರೀಡಾಕೂಟವನ್ನು “ಶಕ್ತಿ” ಎಂಬ ಶೀರ್ಷಿಕೆಯಡಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವು ಯುಕೆಜಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.
ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ ನಂತರ ಮುಖ್ಯ ಅತಿಥಿಗಳಾದ ಶ್ರೀ ಅಶೋಕ್ ಶೆಟ್ಟಿ ಅವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಲಾಯಿತು. ಶ್ರೀನಿಕಾ ಮತ್ತು ಸುಶ್ರುತ ವಾಗ್ಲೆ ಸ್ವಾಗತ ಭಾಷಣ ಮಾಡಿದರು. ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು. ಆರವಿ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು.
ಯುಕೆಜಿ ವಿದ್ಯಾರ್ಥಿಗಳಿಂದ ಡಂಬೆಲ್ ಪ್ರದರ್ಶನ ಹಾಗೂ ನರ್ಸರಿ ಮತ್ತು ಎಲ್ಕೆಜಿ ವಿದ್ಯಾರ್ಥಿಗಳಿಂದ ಏರೋಬಿಕ್ಸ್ ಪ್ರದರ್ಶನ ನಡೆಯಿತು. ಮುಖ್ಯ ಅತಿಥಿಗಳು ಹಾಗೂ ಪ್ರಾಂಶುಪಾಲರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದರ್ಶಿಕಾ ವಂದನಾರ್ಪಣೆ ಮಾಡಿದರು. ಶ್ರೀಮತಿ ಭವಾನಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಮಕ್ಕಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡಭಾವನೆ ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಉದ್ದೇಶದೊಂದಿಗೆ ಆಯೋಜಿಸಲಾದ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.

























