
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಪುಷ್ಪಾರ್ಚನೆ ಸಲ್ಲಿಸಿ, ನಾಡಗೀತೆಯನ್ನು ಹಾಡುವ ಮೂಲಕ ಕನ್ನಡಾಂಬೆಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಕನ್ನಡದ ಕಂಪು, ನಾಡಿನ ಹೆಮ್ಮೆ ಮತ್ತು ಸಂಸ್ಕೃತಿಯ ಸೊಬಗನ್ನು ಸಾರುವ ಮೂಲಕ ಕಾರ್ಯಕ್ರಮವು ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.
























