23.5 C
Udupi
Tuesday, November 24, 2026
spot_img
spot_img
HomeBlogಶ್ರೀಕೃಷ್ಣನ ಪವಿತ್ರ ಕ್ಷೇತ್ರ ಉಡುಪಿಯಲ್ಲಿ ಲೋಕಕಲ್ಯಾಣಕ್ಕಾಗಿ ಐತಿಹಾಸಿಕ 'ಶ್ರೀ ಮಹಾಧನ್ವಂತರಿ ಯಾಗ'

ಶ್ರೀಕೃಷ್ಣನ ಪವಿತ್ರ ಕ್ಷೇತ್ರ ಉಡುಪಿಯಲ್ಲಿ ಲೋಕಕಲ್ಯಾಣಕ್ಕಾಗಿ ಐತಿಹಾಸಿಕ ‘ಶ್ರೀ ಮಹಾಧನ್ವಂತರಿ ಯಾಗ’

ಈಗಾಗಲೇ 9,000 ಕ್ಕೂ ಅಧಿಕ ಭಕ್ತರಿಂದ ನೋಂದಣಿ; 15,000 ಜನರ ಸಹಭಾಗದ ನಿರೀಕ್ಷೆ

ನವೆಂಬರ್ 29 ರಂದು ಎಂ.ಜಿ.ಎಂ. ಕಾಲೇಜು ಮೈದಾನದಲ್ಲಿ ಭವ್ಯ ಆಯೋಜನೆ

ಉಡುಪಿ, :
ಸನಾತನ ಸಂಸ್ಥೆಯ ವತಿಯಿಂದ ಸಮಸ್ತ ಸಮಾಜದ ಆರೋಗ್ಯ, ಕ್ಷೇಮ, ರಾಷ್ಟ್ರದ ಸುರಕ್ಷತೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ನವೆಂಬರ್ 29 ರಂದು ಉಡುಪಿಯ ಕುಂಜಿಬೆಟ್ಟಿನ ಎಂ.ಜಿ.ಎಂ. ಕಾಲೇಜು ಮೈದಾನದಲ್ಲಿ ಬೃಹತ್ ‘ಶ್ರೀ ಮಹಾಧನ್ವಂತರಿ ಯಾಗ’ವನ್ನು ಆಯೋಜಿಸಲಾಗಿದೆ. ಈ ಮಹಾಯಾಗದಲ್ಲಿ ಪಾಲ್ಗೊಳ್ಳಲು ಈಗಾಗಲೇ 9,000 ಕ್ಕೂ ಅಧಿಕ ಭಕ್ತಾದಿಗಳು ಉಚಿತವಾಗಿ ನೋಂದಣಿ ಮಾಡಿಕೊಂಡಿದ್ದು, ಸುಮಾರು 15,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಆಯೋಜಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಉಡುಪಿ ಶಾಸಕರಾದ . ಯಶ್‌ಪಾಲ್ ಸುವರ್ಣ, ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತ ಪೂಜ್ಯ ರಮಾನಂದ ಗೌಡ, ಯಾಗ ಆಯೋಜನಾ ಸಮಿತಿಯ ಸಂಚಾಲಕ. ಗುರುಪ್ರಸಾದ್ ಗೌಡ, ಸ್ವಾಗತ ಸಮಿತಿಯ ಸಂಘಟನಾ ಕಾರ್ಯದರ್ಶಿ. ವಿಜಯ್ ಕೊಡವೂರು ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ. ರಮೇಶ ಶಿಂದೆ ಉಪಸ್ಥಿತರಿದ್ದರು.

ಯಾಗದ ವಿಶೇಷತೆಗಳು ಮತ್ತು ಗಣ್ಯರ ಹೇಳಿಕೆಗಳು :

ಗುರುಪ್ರಸಾದ್ ಗೌಡ (ಸಂಚಾಲಕರು, ಆಯೋಜನಾ ಸಮಿತಿ):
“ಶ್ರೀಕೃಷ್ಣನ ಪವಿತ್ರ ಕ್ಷೇತ್ರವಾದ ಉಡುಪಿಯಲ್ಲಿ ಇಂತಹ ಬೃಹತ್ ಮಹಾಧನ್ವಂತರಿ ಯಾಗ ನಡೆಯುತ್ತಿರುವುದು ಉಡುಪಿಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ. ಸನಾತನ ಸಂಸ್ಥೆಯ ಮಾರ್ಗದರ್ಶನದಲ್ಲಿ ಯಾಗದ ಯಶಸ್ಸಿಗಾಗಿ ಶಾಸಕ. ಯಶ್‌ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು, ಪ್ರಧಾನ ಕಾರ್ಯದರ್ಶಿ. ಸುರೇಶ್, ಕಾರ್ಯದರ್ಶಿ ವಿಜಯ್ ಕೊಡವೂರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿಯ ಎಲ್ಲಾ ಮಠಾಧೀಶರು, ಧಾರ್ಮಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು, ಭಜನಾ ಹಾಗೂ ಮಹಿಳಾ ಮಂಡಳಿಗಳು, ವೈದ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಉದ್ಯಮಿಗಳಿಗೆ ಆಮಂತ್ರಣ ನೀಡಲಾಗಿದೆ.

ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ, ಚಂದ್ರದೇವತೆಯಿಂದ ಸ್ಥಾಪಿತವಾಗಿ 1000 ವರ್ಷಗಳಿಂದ ಸುರಕ್ಷಿತವಾಗಿ ಸಂರಕ್ಷಿಸಲಾದ ‘ಸೋರಟಿ ಸೋಮನಾಥ ಜ್ಯೋತಿರ್ಲಿಂಗ’ದ ದಿವ್ಯ ಅಂಶಗಳನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಸಮಸ್ತ ಭಕ್ತರು ಇದರ ಪೂರ್ಣ ಲಾಭ ಪಡೆಯಬೇಕು ಎಂದರು.

ವಿಜಯ್ ಕೊಡವೂರು (ಸಂಘಟನಾ ಕಾರ್ಯದರ್ಶಿ, ಸ್ವಾಗತ ಸಮಿತಿ):
“ಮಹಾಧನ್ವಂತರಿ ಯಾಗದ ಮಾಹಿತಿಯನ್ನು ಜಿಲ್ಲೆಯಾದ್ಯಂತ ತಲುಪಿಸಲು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬ್ಯಾನರ್, ಫಲಕಗಳನ್ನು ಅಳವಡಿಸಲಾಗಿದ್ದು, ಸಾವಿರಾರು ಮನೆಗಳಿಗೆ ನೇರವಾಗಿ ಆಮಂತ್ರಣ ಪತ್ರಿಕೆಗಳನ್ನು ತಲುಪಿಸಲಾಗಿದೆ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕವೂ ಪ್ರಚಾರ ನಡೆಸಲಾಗುತ್ತಿದೆ.
ಎಂ.ಜಿ.ಎಂ. ಕಾಲೇಜು ಮೈದಾನದಲ್ಲಿ ಬೃಹತ್ ಜರ್ಮನ್ ಹ್ಯಾಂಗರ್ ಮಾದರಿಯ ಪೆಂಡಾಲ್ ನಿರ್ಮಾಣ ಭರದಿಂದ ಸಾಗುತ್ತಿದೆ. ಯಾಗ ಮಂಟಪ, ವೇದಿಕೆ, ಧರ್ಮಪ್ರದರ್ಶನ ಮಳಿಗೆಗಳ ಜೊತೆಗೆ ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತಾದಿಗಳಿಗೂ ಅನುಕೂಲವಾಗುವಂತೆ ವಾಹನ ಪಾರ್ಕಿಂಗ್, ಸುಗಮ ಸಂಚಾರ, ಪ್ರವೇಶ-ನಿರ್ಗಮನ ಮಾರ್ಗಗಳು, ಸ್ವಯಂಸೇವಕರ ನಿಯೋಜನೆ, ಆಸನ, ಕುಡಿಯುವ ನೀರು ಹಾಗೂ ಸ್ವಚ್ಛತೆಯ ಅಚ್ಚುಕಟ್ಟು ವ್ಯವಸ್ಥೆ ಮಾಡಲಾಗುತ್ತಿದೆ. ನವೆಂಬರ್ 26 ರ ವೇಳೆಗೆ ಮೈದಾನದ ಎಲ್ಲಾ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಈ ಮಹಾಯಾಗದ ಯಶಸ್ಸಿಗೆ ಉಡುಪಿಯ ನಾಗರಿಕರು, ಸಂಘ-ಸಂಸ್ಥೆಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಬೇಕು,” ಎಂದು ಕೋರಿದರು.

ಶಾಸಕ. ಯಶ್‌ಪಾಲ್ ಸುವರ್ಣ ಅವರು ಈ ಐತಿಹಾಸಿಕ ಯಾಗದ ಯಶಸ್ಸಿಗೆ ತಮ್ಮ ಸಂಪೂರ್ಣ ಸಹಕಾರವಿರುವುದಾಗಿ ತಿಳಿಸಿದರು.

ವಿನೋದ್ ಕಾಮತ್, ಸನಾತನ ಸಂಸ್ಥೆ, ಸಂಪರ್ಕ: 9342599299

ಶ್ರೀ ಮಹಾಧನ್ವಂತರಿ ಯಾಗ ಸ್ವಾಗತ ಸಮಿತಿ, ಸಂಪರ್ಕ: 9343017001

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page