
ಬೆಂಗಳೂರು: ಸೆಪ್ಟೆಂಬರ್ 24ರಿಂದ ಅಕ್ಟೋಬರ್ 1ರವರೆಗೆ ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ನಿಗದಿಯಾಗಿದ್ದು ಇದೀಗ ಮಧ್ಯ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.
ಇದೇ ಮೊದಲ ಭಾರಿಗೆ ಬೋರ್ಡ್ ನಿಂದ ಅರ್ಧ ವಾರ್ಷಿಕ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತು. ಆದರೆ SSLC ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆ ಹೊಸ ನಿಯಮದಿಂದ ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ನ್ಯಾಯ ಸಿಗ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ವರ್ಷದಿಂದ ಹೊಸ ರೂಲ್ಸ್ ಜಾರಿ ಮಾಡಲಾಗಿದ್ದು ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿ ಬಳಿಕ ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೆ ಈ ವರ್ಷ ಅದಕ್ಕೆ ಬ್ರೇಕ್ ಹಾಕಲಾಯಿತು. ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಏಕರೂಪ ಪ್ರಶ್ನೆ ಪತ್ರಿಕೆ ತರಲು ಆದೇಶ ಮಾಡಲಾಗಿತ್ತು. ಇದೇ ಈಗ ಪ್ರಶ್ನೆ ಪತ್ರಿಕೆ ಲೀಕ್ ಆಗಲು ಕಾರಣ ಆಗಿದೆ ಎನ್ನಲಾಗುತ್ತಿದೆ.