28.6 C
Udupi
Saturday, October 17, 2026
spot_img
spot_img
HomeBlogSSLC–PUC ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್: ಮೂರು ಪರೀಕ್ಷೆ ರದ್ದು, ಇನ್ಮುಂದೆ ಎರಡೇ ಪರೀಕ್ಷೆ!

SSLC–PUC ವಿದ್ಯಾರ್ಥಿಗಳಿಗೆ ಬಿಗ್ ನ್ಯೂಸ್: ಮೂರು ಪರೀಕ್ಷೆ ರದ್ದು, ಇನ್ಮುಂದೆ ಎರಡೇ ಪರೀಕ್ಷೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಮೂರು ಮುಖ್ಯ ಪರೀಕ್ಷೆಗಳ ವ್ಯವಸ್ಥೆಯನ್ನು ರದ್ದುಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಶೈಕ್ಷಣಿಕ ವರ್ಷದಿಂದ ಮೂರು ಪರೀಕ್ಷೆಗಳ ಬದಲಿಗೆ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ತೀರ್ಮಾನಿಸಲಾಗಿದ್ದು, ವಿದ್ಯಾರ್ಥಿಗಳು ಆರಂಭದಿಂದಲೇ ಪರೀಕ್ಷಾ ಸಿದ್ಧತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ.

ಕಳೆದ ವರ್ಷದ ದಾಖಲೆಯ ಫಲಿತಾಂಶದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ಎರಡು ಪರೀಕ್ಷೆಗಳನ್ನೇ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಕೂಡ ವಿದ್ಯಾರ್ಥಿಗಳನ್ನು ಹೊಸ ಪರೀಕ್ಷಾ ಮಾದರಿಗೆ ಅನುಗುಣವಾಗಿ ಸಿದ್ಧಪಡಿಸುವಂತೆ ಇಲಾಖೆ ಸೂಚಿಸಿದೆ.

ಮೂರು ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯಿಂದ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿತ್ತು. ಅಲ್ಲದೆ, ಮಾರ್ಚ್‌ನಿಂದ ಸೆಪ್ಟೆಂಬರ್‌ವರೆಗೆ ಪರೀಕ್ಷೆಗಳನ್ನು ನಡೆಸುವುದರಿಂದ ಪರೀಕ್ಷಾ ಮಂಡಳಿಯ ಸಿಬ್ಬಂದಿಗೆ ಹೆಚ್ಚಿನ ಕೆಲಸದೊತ್ತಡ ಉಂಟಾಗಲಿದೆ ಎಂಬ ಅಭಿಪ್ರಾಯವೂ ಕೇಳಿಬಂದಿತ್ತು.

ಇನ್ನೊಂದೆಡೆ, ಮೂರು ಪರೀಕ್ಷೆಗಳು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಹೆಚ್ಚುವರಿ ಅವಕಾಶ ಕಲ್ಪಿಸುತ್ತವೆ ಎಂಬ ವಾದವೂ ಇತ್ತು. ಆದರೂ, ಶಿಕ್ಷಣ ಇಲಾಖೆ ಇದೀಗ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸುವ ನಿರ್ಧಾರ ಕೈಗೊಂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page