
ಶಾಲಾ ಶಿಕ್ಷಣ ಇಲಾಖೆಯು ಇತ್ತೀಚೆಗೆ ಕುಂದಾಪುರದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಸ್ವಸ್ತಿ ಹಾಗೂ ಶ್ರಾವಣಿ ಪ್ರಥಮ ಸ್ಥಾನ ಗಳಿಸಿ, ಬೆಂಗಳೂರಿನ ವಿಜಯನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಇವರನ್ನು ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.






























































































































